ನವದೆಹಲಿ: ದೇಶದಲ್ಲಿ ಸೋಮವಾರ 203 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದು, ಹೊಸ ಅಲೆಯಲ್ಲಿ ಸೋಂಕಿತರ ಸಂಖ್ಯೆ 3,961ಕ್ಕೇರಿದೆ. ದೆಹಲಿ, ತಮಿಳುನಾಡು, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇರಳದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು, ಸಂಖ್ಯೆ 1435ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ 506, ದೆಹಲಿಯಲ್ಲಿ 483, ಗುಜರಾತ್‌ನಲ್ಲಿ 338, ಪಶ್ಚಿಮ ಬಂಗಾಳದಲ್ಲಿ 331, ಕರ್ನಾಟಕದಲ್ಲಿ 253 ಹಾಗೂ ಉತ್ತರ ಪ್ರದೇಶದಲ್ಲಿ 157 ಕೋವಿಡ್ ಪ್ರಕರಣಗಳು ದಾಖಲಾಗಿವೆ.