ಆಂಧ್ರದಲ್ಲಿ ಚುನಾವಣೆಗಿದ್ದ ಎರಡು ಮಕ್ಕಳ ನೀತಿ ರದ್ದತಿ : ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ

KannadaprabhaNewsNetwork |  
Published : Aug 09, 2024, 12:52 AM ISTUpdated : Aug 09, 2024, 04:52 AM IST
ಆಂಧ್ರಪ್ರದೇಶ | Kannada Prabha

ಸಾರಾಂಶ

ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ವಿಜಯವಾಡ: ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ ದೂರವಿರಿಸಿದ್ದ ಆಂಧ್ರಪ್ರದೇಶ ಮುನಿಸಿಪಲ್ ಕಾರ್ಪೊರೇಷನ್‌ ಕಾಯ್ದೆ, 1994 ಮತ್ತು ಪಂಚಾಯತ್‌ ರಾಜ್‌ ಕಾಯ್ದೆ, 1994ಕ್ಕೆ ಕೆಲ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಜನಸಂಖ್ಯಾ ನಿರ್ವಹಣೆಗೆ ಈ ನಡೆ ಸಹಕಾರಿ ಎಂದು ಸರ್ಕಾರ ಹೇಳಿದೆ.

ಹೊಸ ಕಾಯ್ದೆ ಜಾರಿಗೆ ಬಂದರೆ 2ಕ್ಕಿಂತ ಹೆಚ್ಚು ಮಕ್ಕಳು ಹೊಂದಿರುವವರು ಕೂಡಾ ಇನ್ನು ಚುನಾವಣೆಗೆ ಸ್ಪರ್ಧಿಸಬಹುದು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾರು ಬುಕ್‌ ಮಾಡುವಾಗಲೇ ಟಿಪ್ಸ್‌ ಕೇಳುವುದಕ್ಕೆ ನಿಷೇಧ!
ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ