ಉತ್ತರಾಖಂಡದಲ್ಲಿ ಪ್ರಪಾತಕ್ಕೆ ಉರುಳಿದ ಬಸ್‌: 36 ಬಲಿ

KannadaprabhaNewsNetwork |  
Published : Nov 05, 2024, 12:32 AM IST
ಬಸ್‌ ದುರಂತ | Kannada Prabha

ಸಾರಾಂಶ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಖಾಸಗಿ ಬಸ್ಸೊಂದು ಸೋಮವಾರ 200 ಮೀ. ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಕನಿಷ್ಠ 36 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಡೆಹ್ರಾಡೂನ್‌: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಖಾಸಗಿ ಬಸ್ಸೊಂದು ಸೋಮವಾರ 200 ಮೀ. ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಕನಿಷ್ಠ 36 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 4 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೃಷಿಕೇಶದ ಏಮ್ಸ್‌ ಮತ್ತು ಸುಶೀಲಾ ತಿವಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಢವಾಲ್‌ನ ಪೌಢಿಯಿಂದ ಕುಮಾವ್‌ನ ರಾಮನಗರಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. 43 ಆಸನಗಳ ವ್ಯವಸ್ಥೆ ಇದ್ದ ಬಸ್‌ನಲ್ಲಿ 60 ಜನರನ್ನು ಕರೆದೊಯ್ಯಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಮೃತ ಪಟ್ಟ ಕುಟುಂಬಗಳಿಗೆ ತಲಾ 4 ಲಕ್ಷ ರು. ಹಾಗೂ ಗಾಯಗೊಂಡವರಿಗೆ 1 ಲಕ್ಷ ರು. ಪರಿಹಾರ ನೀಡಲಾಗುವುದಾಗಿ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಘೋಷಿಸಿದ್ದಾರೆ.

ಈ ನಡುವೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಮ್ಮ ಟ್ವೀಟರ್‌ ಖಾತೆ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ