ಶ್ರೀನಗರ: ಕಾಶ್ಮೀರ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟದಲ್ಲಿನ ‘ಹಿರಿಯಣ್ಣ’ ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ಏಕಾಂಗಿಯಾಗಿ ಬಹುಮತ ಲಭಿಸದೆ. ಏಕೆಂದರೆ ನಾಲ್ವರು ಸ್ವತಂತ್ರ ಶಾಸಕರು ಎನ್‌ಸಿಗೆ ಗುರುವಾರ ಬೆಂಬಲ ಘೋಷಿಸಿದ್ದಾರೆ.
==
ಏಕ ಚುನಾವಣೆ ವಿರುದ್ಧ ಕೇರಳ ವಿಧಾನಸಭೆ ನಿರ್ಣಯತಿರುವನಂತಪುರಂ: ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಹಾಗೂ ಆ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ.
ಕೇರಳ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ, ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಅವರು ನಿರ್ಣಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಸಚಿವರು, ವಿರೋಧ ಪಕ್ಷ ಯುಡಿಎಫ್‌ನ ಶಾಸಕರು ಸೂಚಿಸಿದ ಕೆಲವು ತಿದ್ದುಪಡಿಗಳನ್ನು ಒಪ್ಪಿದ ಬಳಿಕ ಸದನದಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರವಾಯಿತು.ಈ ಬಗ್ಗೆ ಮಾತನಾಡಿದ ಸಚಿವ ಎಂ.ಬಿ.ರಾಜೇಶ್ ‘ಇದು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಮತ್ತು ಸ್ಥಳೀಯಾಡಳಿತಗಳ ಅವಧಿ ಕಡಿತಗೊಳ್ಳುವುದಕ್ಕೆ ಕಾರಣವಾಗುತ್ತದೆ. ಈ ಕ್ರಮವು ಅಸಂವಿಧಾನಿಕ ಮತ್ತು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಜೆಂಡಾವನ್ನು ಜಾರಿಗೆ ತರುವ ಪ್ರಯತ್ನವಾಗಿದೆ’ ಎಂದರು.