ಅಯೋಧ್ಯೆ ಧರ್ಮಪಥದಲ್ಲಿ 40 ಸೂರ್ಯಸ್ತಂಭ ಮೋದಿಯಿಂದ ಉದ್ಘಾಟನೆ

KannadaprabhaNewsNetwork |  
Published : Dec 28, 2023, 01:45 AM IST
ಬೀದಿದೀಪಗಳು | Kannada Prabha

ಸಾರಾಂಶ

ದೀಪ ಹಚ್ಚಿದಾಗ ಸೂರ್ಯನಂತೆ ಕಂಗೊಳಿಸಲಿರುವ 40 ಬೀದಿದೀಪಗಳನ್ನು ಅಯೋಧ್ಯೆಯ ಧರ್ಮಪಥದಲ್ಲಿ ಅಳವಡಿಕೆ ಮಾಡಲಾಗಿದ್ದು, ಡಿ.29ರೊಳಗೆ ಕಾಮಗಾರಿ ಮುಗಿಸಲಾಗುವುದು ಎಂದು ಅಯೋಧ್ಯೆಯ ಲೋಕೋಪಯೋಗಿ ಎಂಜಿನಿಯರ್‌ ಎ ಪಿ ಸಿಂಗ್‌ ತಿಳಿಸಿದ್ದಾರೆ.

ಅಯೋಧ್ಯೆ: ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ನಗರವನ್ನು ಸುಂದರೀಕರಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಈ ನಡುವೆ ಅಯೋಧ್ಯೆಯ ಧರ್ಮಪಥದ ಉಭಯ ಬದಿಗಳಲ್ಲಿ ತಲಾ 10 ಬೀದಿದೀಪಗಳ ಸ್ತಂಭಗಳು ನಿರ್ಮಾಣವಾಗುತ್ತಿದ್ದು, ಅವುಗಳಲ್ಲಿ ಜ್ಯೋತಿ ಬೆಳಗಿಸಿದಾಗ ಸೂರ್ಯನ ಆಕಾರದಲ್ಲಿ ಕಂಗೊಳಿಸುವಂತೆ ವಿನ್ಯಾಸ ಮಾಡಲಾಗಿದೆ.ಈ ಕುರಿತು ಮಾಹಿತಿ ನೀಡಿದ ಅಯೋಧ್ಯೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ ಎ.ಪಿ. ಸಿಂಗ್‌, ‘30 ಅಡಿ ಎತ್ತರದ ತಲಾ 10 ಸ್ತಂಭಗಳನ್ನು ಲತಾ ಮಂಗೇಷ್ಕರ್‌ ವೃತ್ತದಿಂದ ಅಯೋಧ್ಯೆ ಬೈಪಾಸ್‌ವರೆಗೆ ಉಭಯ ಬದಿಗಳಲ್ಲಿ ಸ್ಥಾಪಿಸಲಾಗುತ್ತಿದೆ. ಉಳಿದ 20 ಸೂರ್ಯಸ್ತಂಭಗಳನ್ನು ಧರ್ಮ ಪಥದ ಸತ್ರಂಗಿ ಪೂಲ್‌ ಬಳಿ ಸ್ಥಾಪಿಸಲಾಗುತ್ತಿದೆ. ಇದರ ಕಾಮಗಾರಿ ಡಿ.29ರೊಳಗೆ ಮುಗಿಯಲಿದ್ದು, ಡಿ.30ರಂದು ನರೇಂದ್ರ ಮೋದಿಯವರನ್ನು ಈ ಸೂರ್ಯಸ್ತಂಭಗಳು ಅಯೋಧ್ಯೆಗೆ ಸ್ವಾಗತಿಸಲಿವೆ’ ಎಂದು ತಿಳಿಸಿದ್ದಾರೆ.ಸೂರ್ಯಸ್ತಂಭಗಳನ್ನು ಮುಂಬೈ ಮೂಲದ ಸನ್‌ಸಿಟಿ ಇನೋವೇಷನ್ಸ್‌ ಸಂಸ್ಥೆಯವರು ನಾಸಿಕ್‌ನಲ್ಲಿ ತಯಾರಿಸಿದ್ದು, 30 ಅಡಿ ಎತ್ತರದ ಈ ಸ್ತಂಭಗಳನ್ನು ಕಾಂಕ್ರೀಟ್‌ ಪಿಲ್ಲರ್‌ನಿಂದ ನಿರ್ಮಾಣ ಮಾಡಲಾಗಿದೆ. ಅಲ್ಲದೆ ದೀಪಗಳ ಹೊದಿಕೆಯನ್ನು ಕಾಪರ್‌ ಪ್ಲೇಟ್‌ನಿಂದ ತಯಾರಿಸಲಾಗಿದ್ದು, ಸ್ತಂಭಕ್ಕೆ ಗಾಜಿನ ಫೈಬರ್‌ ಹೊದಿಕೆ ಹಾಕಲಾಗಿದೆ ಎಂದು ಸಂಸ್ಥೆಯ ಮ್ಯಾನೇಜರ್‌ ಸಚಿನ್‌ ನಿಕುಂಭ್‌ ಮಾಹಿತಿ ನೀಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!