ರಾಮಭದ್ರಾಚಾರ್ಯ, ಗುಲ್ಜಾರ್‌ಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪ್ರಕಟ

KannadaprabhaNewsNetwork | Updated : Feb 18 2024, 01:22 PM IST

ಸಾರಾಂಶ

ಗುಲ್ಜಾರ್‌ ಮತ್ತು ರಾಮಭದ್ರಾಚಾರ್ಯರಂತಹ ಉರ್ದು, ಸಂಸ್ಕೃತ ಸಾಹಿತಿಗಳಿಗೆ 58ನೇ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

ನವದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್‌ ಮತ್ತು ಸಂಸ್ಕೃತ ವಿದ್ವಾಂಸರಾದ ಜಗದ್ಗುರು ರಾಮಭದ್ರಾಚಾರ್ಯ ಅವರನ್ನು 58ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ಸಾಹಿತಿ, ಕವಿ ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಧನೆಗೆ ಹೆಸರುವಾಸಿಯಾಗಿದ್ದಾರೆ. ಅಲ್ಲದೇ ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂನಿಸಿಕೊಂಡಿದ್ದಾರೆ. 

ಈ ಹಿಂದೆ ಗುಲ್ಜಾರ್‌ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಸೇರಿದಂತೆ ಅವರ ಹಾಡುಗಳಿಗೆ ಈವರೆಗೆ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. 

ಇನ್ನು ರಾಮಭದ್ರಾಚಾರ್ಯರು ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾಗಿದ್ದು, ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣ ತಜ್ಞರಾಗಿದ್ದಾರೆ. 

ಅಲ್ಲದೇ ಈವರೆಗೆ ಇವರು 100ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಗೋವಾದ ಲೇಖಕ ದಾಮೋದರ್ ಮೌಝೋ 2022ರ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದರು.

Share this article