ಲೋಕಸಭಾ ಚುನಾವಣೆ: ಶೇ.65.79 ಮತದಾನ

KannadaprabhaNewsNetwork |  
Published : Jun 07, 2024, 12:30 AM ISTUpdated : Jun 07, 2024, 08:07 AM IST
ಚು. ಆಯೋಗ | Kannada Prabha

ಸಾರಾಂಶ

18ನೇ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಹೊರತು ಪಡಿಸಿ ಶೇ.65.79 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನವದೆಹಲಿ: 18ನೇ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಹೊರತು ಪಡಿಸಿ ಶೇ.65.79 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಒಟ್ಟು 64.2 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 7 ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು ಶೇ. 65.79ರಷ್ಟು ಮತದಾನವಾಗಿದೆ. ಇದು ಇವಿಎಂ ಮುಖಾಂತರವಾದ ಮತದಾನವಾಗಿದೆ ಎಂದರು.

ಕಳೆದ ಬಾರಿಯ ಚುನಾವಣೆಯಲ್ಲಿ ಶೇ.67.40ರಷ್ಟು ಮತದಾನವಾಗಿತ್ತು. ಆಗ ಭಾರತವು 91.20 ಕೋಟಿ ಮತದಾರರನ್ನು ಹೊಂದಿತ್ತು. ಈ ಪೈಕಿ 61.5 ಕೋಟಿ ಜನರು ತಮ್ಮ ಹಕ್ಕು ಚಲಾಯಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತದಾರರ ಸಂಖ್ಯೆ 96.88 ಕೋಟಿಯಷ್ಟಿತ್ತು.

ಕೆಲವೇ ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಅಂಚೆ ಮತದಾನದ ಬಗ್ಗೆ ಮಾಹಿತಿ ಸಿಗಲಿದೆ. ಅದನ್ನು ಶೀಘ್ರವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ತೆರವು: ಚು. ಆಯೋಗನವದೆಹಲಿ: ಲೋಕಸಭೆ ಚುನಾವಣೆ ಘೋಷಣೆಯಾದ ದಿನದಿಂದ ಅಂದರೆ ಮಾರ್ಚ್‌ 16 ರಿಂದ ದೇಶದಲ್ಲಿ ಜಾರಿಯಲ್ಲಿದ್ದ ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಅಯೋಗ ಗುರುವಾರ ತೆರವುಗೊಳಿಸಿದೆ. ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರ ಮುಖೇನ ತಿಳಿಸಿರುವ ಆಯೋಗ,‘ಲೋಕಸಭೆ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ,ಒಡಿಶಾ, ಆಂಧ್ರಪ್ರದೇಶ ಮತ್ತು ಕೆಲವು ಉಪ ಚುನಾವಣೆಯ ಫಲಿತಾಂಶಗಳನ್ನು ಘೋಷಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಇದುವರೆಗೆ ಜಾರಿಯಲ್ಲಿದ್ದ ಮಾದರಿ ನೀತಿ ಸಂಹಿತೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಆಸ್ಟ್ರೇಲಿಯಾದಲ್ಲಿ 426 ಕೆಜಿಯ ಗಾಂಧಿ ಕಂಚಿನ ಪ್ರತಿಮೆ ಧ್ವಂಸ, ಕಳವು
6 ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ