ಮುಂಬೈ ರೈಲು ಸ್ಫೋಟ ಆರೋಪಿಗಳ ಖುಲಾಸೆಗೆ ಸುಪ್ರೀಂ ಕೋರ್ಟ್ ತಡೆ

KannadaprabhaNewsNetwork |  
Published : Jul 25, 2025, 12:31 AM ISTUpdated : Jul 25, 2025, 04:37 AM IST
Supreme Court stays operation of Mumbai blasts case verdict as judicial precedent says convicts need not surrender

ಸಾರಾಂಶ

189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

 ನವದೆಹಲಿ: 189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ಆದರೆ ಹೈಕೋರ್ಟ್ ತೀರ್ಪಿನ ನಂತರ ಬಿಡುಗಡೆಗೊಂಡಿರುವ ಅವರನ್ನು ಪುನಃ ಬಂಧಿಸಿ ಜೈಲಿಗೆ ಕಳುಹಿಸುವ ಅಗತ್ಯವಿಲ್ಲ. ಅಲ್ಲದೆ, ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಉಳಿದ ಪ್ರಕರಣಗಳಿಗೆ ಮಾನದಂಡವೆಂದು ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

12 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೀರಿತ್ತು.

ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ಪೀಠ, ‘ಆರೋಪಿಗಳನ್ನು ಬಿಡುಗಡೆ ಮಾಡಿದ ವಿಚಾರ ನಮಗೆ ತಿಳಿದಿದೆ. ಅವರನ್ನು ಪುನಃ ಜೈಲಿಗೆ ಕಳಿಸುವ ಪ್ರಶ್ನೆಯೇ ಇಲ್ಲ. ಆದರೆ ಕಾನೂನಿನ ಪ್ರಶ್ನೆಗೆ ಸಂಬಂಧಿಸಿದಂತೆ ಸರ್ಕಾರದ ಪರ ಸಾಲಿಸಿಟರ್ ಜನರಲ್ ಮಾಡಿದ ವಾದವನ್ನು ಗಮನಿಸಿ, ಆಕ್ಷೇಪಾರ್ಹ ತೀರ್ಪಿಗೆ ತಡೆ ನೀಡಲಾಗುವುದು. ಬಾಂಬೆ ಹೈಕೋರ್ಟ್‌ನ ಈ ಆಕ್ಷೇಪಾರ್ಹ ತೀರ್ಪನ್ನು ಪೂರ್ವನಿದರ್ಶನವೆಂದು ಪರಿಗಣಿಸಲಾಗುವುದಿಲ್ಲ’ ಎಂದಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ