ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಭಕ್ತರಿಗಾಗಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಸರತಿ ಸಾಲಿನ ವ್ಯವಸ್ಥೆ

KannadaprabhaNewsNetwork |  
Published : Jan 05, 2025, 01:30 AM ISTUpdated : Jan 05, 2025, 06:21 AM IST
ಕ್ಯೂ  | Kannada Prabha

ಸಾರಾಂಶ

ನಾಡಿನ ಪುಣ್ಯ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ನಿರ್ಮಿಸಲಾಗಿದೆ.

 ಬೆಳ್ತಂಗಡಿ : ನಾಡಿನ ಪುಣ್ಯ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ನಿರ್ಮಿಸಲಾಗಿದೆ. ರಾಜ್ಯದ ದೇಗುಲವೊಂದು ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು.

ಜ.7ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ನೂತನ ಸಂಕಿರ್ಣವನ್ನು ಉದ್ಘಾಟಿಸಲಿದ್ದಾರೆ.

ಡಾ.ಸುದೇಶ ಧನಕರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸುವರು. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹೀಗಿರಲಿದೆ ಸರದಿ ವ್ಯವಸ್ಥೆ:ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ ಸಾಲಿನ ಸಮುಚ್ಚಯ 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, 2 ಅಂತಸ್ತು ಹೊಂದಿದೆ. ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ.

ಇದರರ್ಥ, ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.

ಭವನಗಳಲ್ಲಿ ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್ ಸೌಲಭ್ಯವಿದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣವನ್ನು ಧರ್ಮಸ್ಥಳದಲ್ಲಿ ನಿರ್ಮಿಸಲಾಗಿದೆ.

PREV

Recommended Stories

ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್‌ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ