ಅನಾರೋಗ್ಯ ಸಮಸ್ಯೆಯಿಂದ ಬುಧವಾರ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ .ಅಡ್ವಾಣಿ ಆರೋಗ್ಯ ಸುಧಾರಣೆ ಕಂಡಿದೆ.
ನವದೆಹಲಿ: ಅನಾರೋಗ್ಯ ಸಮಸ್ಯೆಯಿಂದ ಬುಧವಾರ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ .ಅಡ್ವಾಣಿ (96) ಆರೋಗ್ಯ ಸುಧಾರಣೆ ಕಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ.
ಅಡ್ವಾಣಿಯವರನ್ನು ‘ವಯೋಸಹಜ ಕಾಯಿಲೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ವಿಭಾಗದ ವೈದ್ಯರು ಅಡ್ವಾಣಿ ಅವರ ಆರೋಗ್ಯವನ್ನು ಪರಿಶೀಲಿಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.