ಪಹಲ್ಗಾಂ ದಾಳಿ ಸಂಬಂಧ ಉಗ್ರರ ಶಿಬಿರ ನಾಶಕ್ಕೆ ಸರ್ವಪಕ್ಷಗಳ ಒಕ್ಕೊರಲಿನ ಒತ್ತಾಯ

KannadaprabhaNewsNetwork |  
Published : Apr 25, 2025, 12:31 AM ISTUpdated : Apr 25, 2025, 06:17 AM IST
ಸಭೆ  | Kannada Prabha

ಸಾರಾಂಶ

ಪಹಲ್ಗಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ, ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ’ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ.

ನವದೆಹಲಿ: ಪಹಲ್ಗಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ, ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ’ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ.

ಉಗ್ರದಾಳಿಯಲ್ಲಿ ಅಸುನೀಗಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ಸಭೆ ಆರಂಭವಾಗಿದ್ದು, ಸರ್ಕಾರ ದಾಳಿಯ ಕುರಿತು ಸಂಪೂರ್ಣ ಚಿತ್ರಣವನ್ನು ಸರ್ಕಾರ ನೀಡಿತು. ಇದರ ಆಧಾರದಲ್ಲಿ ಎಲ್ಲಾ ಪಕ್ಷಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ. 

ಸರ್ಕಾರದ ಪರವಾಗಿ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಉಪಸ್ಥಿತರಿದ್ದರು. ಅಂತೆಯೆ, ಕಾಂಗ್ರೆಸ್‌, ಎನ್‌ಸಿಪಿ, ಎಂಐಎಂ, ಬಿಜೆಡಿ, ಆಪ್‌ ಡಿಎಂಕೆ ಸೇರಿದಂತೆ ಪ್ರಮುಖ ಪಕ್ಷಗಳ ನಾಯಕರು ಭಾಗವಹಿಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸುಪ್ರೀಂನಲ್ಲಿ ವಕೀಲೆ ಆದ ಬಂಗಾಳದ ಮುಖ್ಯಮಂತ್ರಿ ದೀದಿ!
7 ಲಕ್ಷ ಸೇಬು ಮರ ಉಳಿಸಲು ಚಿಪ್ಕೋ ಚಳವಳಿ : 3 ಕಾಶ್ಮೀರ ರೈಲ್ವೆಗಳ ರದ್ದು