ಮುಂಬೈ: ಮಹಾರಾಷ್ಟ್ರದ ಪ್ರಸಿದ್ಧ ದೇಗುಲ ಶನಿ ಶಿಂಗ್ನಾಪುರದ ಮಾಜಿ ಟ್ರಸ್ಟಿ, ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ.
ದೇಗುಲದಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಘಟನೆ ನಡೆದಿದೆ. ನಿತಿನ್ ಶೇಟ್ ( 43) ಆತ್ಮಹತ್ಯೆ ಮಾಡಿಕೊಂಡವರು. ವಸ್ತಿಯಲ್ಲಿರುವ ಅವರ ನಿವಾಸದಲ್ಲಿ ಶವ ಪತ್ತೆಯಾಗಿದೆ.
ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ನಕಲಿ ಆ್ಯಪ್‌ಗಳ ಮೂಲಕ ದೇಣಿಗೆ ಸಂಗ್ರಹಿಸಿದ ಆರೋಪ ಮತ್ತು ದೇಗುಲದ ದೈನಂದಿನ ಕಾರ್ಯಾಚರಣೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.