ನವದೆಹಲಿ: ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.
ಇವರು ಶಾಸಕಾಂಗ ಸಭೆಗೆ ವೀಕ್ಷಕರಾಗಿ ಆಗಮಿಸಿ ಸಿಎಂ ಆಯ್ಕೆ ಮೇಲುಸ್ತುವಾರಿ ವಹಿಸುತ್ತಾರೆ. ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರೇ ಮತ್ತೆ ಸಿಎಂ ಆಗುವುದು ಖಚಿತವಾಗಿದ್ದು, ಔಪಚಾರಿಕತೆ ಬಾಕಿ ಇದೆ. ಅ.17ರಂದು ಪ್ರಮಾಣವಚನ ಸ್ವೀಕಾರ ನಡೆಯಲಿದೆ.