ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಹತ್ಯೆ ಬೆದರಿಕೆ ಕರೆ

KannadaprabhaNewsNetwork |  
Published : Dec 10, 2024, 12:30 AM ISTUpdated : Dec 10, 2024, 07:57 AM IST
ಕಲ್ಯಾಣ್‌  | Kannada Prabha

ಸಾರಾಂಶ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಹತ್ಯೆ ಮಾಡುವುದಾಗಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ.

ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಹತ್ಯೆ ಮಾಡುವುದಾಗಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ.

ಈ ಬಗ್ಗೆ ಅವರ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಕಲ್ಯಾಣ್‌ ಅವರನ್ನು ಗುರಿಯಾಗಿಸಿ ಅವಹೇಳನಕಾರಿ ಸಂದೇಶಗಳನ್ನು ಕಳಿಸಲಾಗಿದೆ. ಡಿಸಿಎಂ ಕಚೇರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ’ ಎಂದು ತಿಳಿಸಲಾಗಿದೆ. ಈ ಕುರಿತು ಕಲ್ಯಾಣ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ