5ನೇ ಇ.ಡಿ. ಸಮನ್ಸ್‌ಗೂ ಕೇಜ್ರಿವಾಲ್‌ ಚಕ್ಕರ್‌

KannadaprabhaNewsNetwork |  
Published : Feb 03, 2024, 01:48 AM ISTUpdated : Feb 03, 2024, 07:44 AM IST
arvind kejriwal

ಸಾರಾಂಶ

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಅರವಿಂದ್‌ ಕೇಜ್ರಿವಾಲ್‌ ಐದನೇ ಬಾರಿಗೂ ಗೈರಾಗಿದ್ದಾರೆ. ಇ.ಡಿ. ಸಮನ್ಸ್‌ ಕಾನೂನುಬಾಹಿರ ಎಂದು ಆಪ್‌ ಆರೋಪಿಸಿದೆ.

ನವದೆಹಲಿ: ದೆಹಲಿಯ ಹಿಂದಿನ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸತತ 5ನೇ ಸಮನ್ಸ್‌ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಗೈರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.2ರ ಶುಕ್ರವಾರದಂದು ವಿಚಾರಣೆಗೆ ಹಾಜರಾಗಲು ಇ.ಡಿ ಕೇಜ್ರಿವಾಲ್‌ಗೆ ನೋಟಿಸ್‌ ನೀಡಿತ್ತು. ಕಳೆದ 4 ತಿಂಗಳಲ್ಲಿ, ನವೆಂಬರ್ 2, ಡಿಸೆಂಬರ್ 21, ಜನವರಿ 3 ಮತ್ತು ಜನವರಿ 18ಕ್ಕೆ ಕೇಜ್ರಿವಾಲ್‌ ಇ.ಡಿ ವಿಚಾರಣೆಗೆ ಗೈರಾಗಿದ್ದಾರೆ. 

ಇನ್ನು ‘ಸಿಎಂ ಕೇಜ್ರಿವಾಲ್‌ ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಂಧಿಸಲು ಇ.ಡಿ ಹೊಂಚು ಹಾಕಿದೆ ಹಾಗೂ ಇದಕ್ಕೆ ಬಿಜೆಪಿಯ ಕುಮ್ಮಕ್ಕಿದೆ. ಕೇಜ್ರಿವಾಲ್‌, ವಿಚಾರಣೆಗೆ ಹಾಜರಾಗುವುದಿಲ್ಲ’ ಎಂದು ಆಪ್‌ ನಾಯಕರು ಮತ್ತೆ ಕಿಡಿ ಕಾರಿದ್ದಾರೆ. 

200 ಬಿಜೆಪಿ, ಆಪ್‌ ಕಾರ್ಯಕರ್ತರು ಸೆರೆ: ಇನ್ನು ಆರೋಪ ಪ್ರತ್ಯಾರೋಪಗಳ ಮೂಲಕ ಅಪ್‌ ಮತ್ತು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪರಸ್ಪರರ ವಿರುದ್ಧ ಪ್ರತಿಭಟಿಸಿಕೊಂಡಿದ್ದಾರೆ. ಈ ವೇಳೆ 150 ಆಪ್‌ ಹಾಗೂ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಅವರ ಸರ್ಕಾರವು ಭಾರೀ ಭ್ರಷ್ಟಾಚಾರ ಎಸಗುತ್ತಿದೆ ಎಂದು ಬಿಜೆಪಿ ಹಾಗೂ ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯು ನಮ್ಮನ್ನು ಸೋಲಿಸಿ ಅಕ್ರಮ ಮಾರ್ಗದಿಂದ ಗೆದ್ದಿದೆ ಎಂದು ಆಪ್‌ ಕಾರ್ಯಕರ್ತರು ಶುಕ್ರವಾರ ದೆಹಲಿಯಲ್ಲಿ ಪ್ರತಿಭಟಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ