ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು

KannadaprabhaNewsNetwork |  
Published : Feb 24, 2024, 02:31 AM ISTUpdated : Feb 24, 2024, 07:49 AM IST
marriage

ಸಾರಾಂಶ

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಲು ಸಂಪುಟ ನಿರ್ಣಯ ತೆಗೆದುಕೊಂಡಿದೆ. ಈ ಮೂಲಕ ಏಕರೂಪ ಸಂಹಿತೆಯತ್ತ ಮೊದಲ ಹೆಜ್ಜೆ ಇಟ್ಟಿದೆ.

ಗುವಾಹಟಿ: ಮಹತ್ವದ ನಿರ್ಧಾರವೊಂದರಲ್ಲಿ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸಚಿವ ಸಂಪುಟವು ಶುಕ್ರವಾರ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ- 1935 ಅನ್ನು ರದ್ದುಗೊಳಿಸಿದೆ.

ಈ ಬಗ್ಗೆ ಹೇಳಿಕೆ ನೋಡಿರುವ ಸಚಿವ ಜಯಂತ ಮಲ್ಲಬರುವ, ‘ಇದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಾಧಿಸುವತ್ತ ಒಂದು ಹೆಜ್ಜೆ. 

ಈಗ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಡಿಕೊಳ್ಳಲಾಗುವುದು’ ಎಂದು ಅವರು ಹೇಳಿದರು.

ಮುಸ್ಲಿಂ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು. 

ಅವರಿಗೆ ತಲಾ 2 ಲಕ್ಷ ರು. ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು.

ಇತ್ತೀಚೆಗೆ ಉತ್ತರಾಖಂಡ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದು, ಇದನ್ನು ಜಾರಿ ಮಾಡಿದ ಸ್ವತಂತ್ರ ಭಾರತದ ಮೊದಲ ದೇಶ ಎನ್ನಿಸಿಕೊಂಡಿತ್ತು.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ