ರಾಮದರ್ಶನ ಅವಧಿ ವಿಸ್ತರಣೆ

KannadaprabhaNewsNetwork |  
Published : Jan 26, 2024, 01:47 AM ISTUpdated : Jan 26, 2024, 07:29 AM IST
ರಾಮಮಂದಿರ | Kannada Prabha

ಸಾರಾಂಶ

ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇಂದಿನಿಂದ ಅಯೋಧ್ಯೆಯಲ್ಲಿ ರಾಮಮಂದಿರ ದರ್ಶನಕ್ಕೆ ತೆರೆದಿರಲಿದೆ. ಈ ಮೊದಲು ಇದ್ದ ಮಧ್ಯಾಹ್ನದ ವಿರಾಮ 15 ನಿಮಿಷಕ್ಕೆ ಇಳಿಕೆ ಮಾಡಲಾಗಿದೆ.

ಅಯೋಧ್ಯೆ: ಅಯೋಧ್ಯೆ ಬಾಲರಾಮ ದರ್ಶನಕ್ಕಾಗಿ ಲಕ್ಷಾಂತರ ಜನ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ‘ರಾಮದರ್ಶನ’ದ ಅವಧಿಯನ್ನು ಮುಂಜಾನೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.

ರಾಮಮಂದಿರವನ್ನು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸಿದ 2 ದಿನಗಳಲ್ಲಿ ಸುಮಾರು 8 ಲಕ್ಷ ಮಂದಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 

ಅಲ್ಲದೇ ಮಂದಿರವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ. ಈ ಮೊದಲು ರಾಮಮಂದಿರದ ದರ್ಶನದ ಅವಧಿಯನ್ನು ಮುಂಜಾನೆ 7 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ನಿಗದಿಪಡಿಸಲಾಗಿತ್ತು. 

ಇದರಲ್ಲಿ ಮಧ್ಯಾಹ್ನ 2 ಗಂಟೆಗಳ ವಿರಾಮ ಸಹ ನೀಡಲಾಗಿತ್ತು. ಬುಧವಾರ ಮಧ್ಯಾಹ್ನದ ವಿರಾಮದ ಅವಧಿಯನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಗುರುವಾರ ಈ ಅವಧಿಯನ್ನು ಕೇವಲ 15 ನಿಮಿಷಗಳಿಗೆ ಕಡಿತಗೊಳಿಸಲಾಗಿದೆ. 

ಮಂದಿರವನ್ನು ಸಂಪರ್ಕಿಸುವ ಬಸ್ತಿ, ಗೊಂಡಾ, ಅಂಬೇಡ್ಕರ್‌ನಗರ, ಬಾರಾಬಂಕಿ, ಸುಲ್ತಾನ್‌ಪುರ ಮತ್ತು ಅಮೇಥಿ ರಸ್ತೆಗಳಲ್ಲಿ ರ್‍ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌ ಮತ್ತು ಕೇಂದ್ರ ಸಶಸ್ತ್ರ ಪಡೆಯನ್ನು ನೇಮಕ ಮಾಡಲಾಗಿದ್ದು, ಭಕ್ತರಿಗಾಗಿ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

PREV

Recommended Stories

ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !
ಕೇರಳದ 2 ರು. ಡಾಕ್ಟರ್ ನಿಧನ