ಬಾಲಿವುಡ್‌ನ ಪ್ರಸಿದ್ಧ ನಟರಿಗೆ ಅತ್ಯಾಪ್ತ ಆಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಹತ್ಯೆಗೈದ ಪಾತಕಿ ಲಾರೆನ್ಸ್ ಬಿಷ್ಣೋಯಿ ತಂಡದ ಹಿಟ್‌ಲಿಸ್ಟ್‌ನಲ್ಲಿ ಸಿದ್ದಿಕಿ ಅವರ ಪುತ್ರ, ಶಾಸಕ ಜೀಶನ್ ಸಿದ್ದಿಕಿ ಕೂಡ ಇದ್ದರು ಎಂಬ ಮಾಹಿತಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಮುಂಬೈ: ಬಾಲಿವುಡ್‌ನ ಪ್ರಸಿದ್ಧ ನಟರಿಗೆ ಅತ್ಯಾಪ್ತ ಆಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಹತ್ಯೆಗೈದ ಪಾತಕಿ ಲಾರೆನ್ಸ್ ಬಿಷ್ಣೋಯಿ ತಂಡದ ಹಿಟ್‌ಲಿಸ್ಟ್‌ನಲ್ಲಿ ಸಿದ್ದಿಕಿ ಅವರ ಪುತ್ರ, ಶಾಸಕ ಜೀಶನ್ ಸಿದ್ದಿಕಿ ಕೂಡ ಇದ್ದರು ಎಂಬ ಮಾಹಿತಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಬಾಬಾ ಸಿದ್ದಿಕಿ ಹಾಗೂ ಅವರ ಪುತ್ರ ಜೀಶನ್ ಇಬ್ಬರನ್ನೂ ಕೊಲ್ಲಲು ತಮಗೆ ಸುಪಾರಿ ನೀಡಲಾಗಿತ್ತು. ಶನಿವಾರ ಸಂಜೆ ಇಬ್ಬರೂ ಒಂದೇ ಸ್ಥಳದಲ್ಲಿ ಸಿಗುತ್ತಾರೆ ಎಂದೂ ತಿಳಿಸಲಾಗಿತ್ತು. ಒಂದು ವೇಳೆ, ಇಬ್ಬರನ್ನೂ ಒಟ್ಟಿಗೇ ಕೊಲ್ಲಲು ಸಾಧ್ಯವಾಗದಿದ್ದರೆ ಮೊದಲು ಸಿಕ್ಕವರನ್ನು ಕೊಂದುಬಿಡಿ ಎಂಬ ನಿರ್ದೇಶನ ಇತ್ತು ಎಂದು ಹತ್ಯೆ ಪ್ರಕರಣದ ಆರೋಪಿಗಳು ಪೊಲೀಸರ ಮುಂದೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೀಶನ್ ಸಿದ್ದಿಕಿ ಮುಂಬೈನ ವಾದ್ರೆ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಗಿದ್ದು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಹಲವು ತಿಂಗಳ ಹಿಂದೆ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.