ವಿದ್ಯಾರ್ಥಿ ಆಗಿದ್ದಾಗ 7 ದಿನ ಜೈಲಿಗೆ ಹಾಕಲಾಗಿತ್ತು : ಕೇಂದ್ರ ಗೃಹ ಸಚಿವ ಅಮಿತ್ ಶಾ

KannadaprabhaNewsNetwork |  
Published : Mar 16, 2025, 01:50 AM ISTUpdated : Mar 16, 2025, 06:50 AM IST
amith shah

ಸಾರಾಂಶ

ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೆನಪಿಸಿಕೊಂಡಿದ್ದಾರೆ.

ಗುವಾಹಟಿ: ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೆನಪಿಸಿಕೊಂಡಿದ್ದಾರೆ.

ಡೆರ್ಗಾಂವ್‌ನಲ್ಲಿ ಪೊಲೀಸ್‌ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾ, ‘ನಾವು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದೆವು. ಆಗ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ನನ್ನನ್ನು ಥಳಿಸಿ ಬಂಧಿಸಿತ್ತು. ನಾನು ಕೂಡ ಅಸ್ಸಾಂನಲ್ಲಿ 7 ದಿನಗಳ ಕಾಲ ಜೈಲಿನ ಆಹಾರವನ್ನು ಸೇವಿಸಿದ್ದೆ. ಆಗ ಹಿತೇಶ್ವರ ಸೈಕಿಯಾ ಮುಖ್ಯಮಂತ್ರಿಯಾಗಿದ್ದರು’ ಎಂದು ಬಹಿರಂಗಪಡಿಸಿದರು.

‘ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಶಾಂತಿಗೆ ಅವಕಾಶ ನೀಡಲಿಲ್ಲ. ಆದರೆ ಕಳೆದ 10 ವರ್ಷದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 10,000 ಕ್ಕೂ ಹೆಚ್ಚು ಯುವಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿದ್ದಾರೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಭಾರತ ವಿರೋಧಿ ಯುವ ನಾಯಕ ಉಸ್ಮಾನ್‌
20 ತಿಂಗಳಲ್ಲಿ ಶೇ.55,000ರಷ್ಟು ಏರಿಕೆ ಷೇರು!