ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.
ಮುಂಬೈ : ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬುಧವಾರ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮದ ದಿಗ್ಗಜರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯ ಅಂಗೀಕರಿಸಲಾಯಿತು. ಈ ವೇಳೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು ಎಂದು ಸಿಎಂ ಕಚೇರಿ ಹೇಳಿದೆ.
ಅವರು ಜಾಗತಿಕ ಮಟ್ಟದಲ್ಲಿ ಟಾಟಾ ಗ್ರೂಪ್ ಮತ್ತು ದೇಶಕ್ಕೆ ಒಂದು ಸ್ಥಾನವನ್ನು ಕೆತ್ತಿದ್ದಾರೆ ಎಂದಿರುವ ಸಂಪುಟ ನಿರ್ಣಯ, ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ಪಿಎಂ ಪರಿಹಾರ ನಿಧಿಗೆ 1,500 ಕೋಟಿ ರು. ಕೊಡುಗೆ ನೀಡಿದ್ದು ಸ್ಮರಣಾರ್ಹ. ಅವರು ಕೋವಿಡ್ ರೋಗಿಗಳಿಗಾಗಿ ಟಾಟಾ ಗ್ರೂಪ್‌ನ ಎಲ್ಲಾ ಹೋಟೆಲ್‌ಗಳನ್ನು ತೆರೆದಿದ್ದರು ಎಂದು ಶ್ಲಾಘಿಸಿದೆ.