ಏರ್ಪೋರ್ಟ್‌ಗೆ 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡ ಮಹಿಳೆ

KannadaprabhaNewsNetwork |  
Published : Jun 13, 2025, 04:45 AM IST
ಭೂಮಿ | Kannada Prabha

ಸಾರಾಂಶ

ಅದೃಷ್ಟವಿದ್ದರೆ ದೊಡ್ಡ ಅನಾಹುತದಿಂದಲೂ ಪಾರಾಗಬಹುದು ಎನ್ನುವುದಕ್ಕೆ ವಿಮಾನ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ ನಿದರ್ಶನ. ಏರಿಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್‌ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ.

ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್‌

15 ನಿಮಿಷ ಮುಂಚೆ ಮೆಸ್ಸಿಂದ ತೆರಳಿದ್ದ ವೈದ್ಯ ರೋಹನ್‌==

ಅಹಮದಾಬಾದ್‌: ಅದೃಷ್ಟವಿದ್ದರೆ ದೊಡ್ಡ ಅನಾಹುತದಿಂದಲೂ ಪಾರಾಗಬಹುದು ಎನ್ನುವುದಕ್ಕೆ ವಿಮಾನ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ ನಿದರ್ಶನ. ಏರಿಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್‌ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್‌ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ಭೂಮಿ ಟ್ರಾಫಿಕ್ ಕಾರಣದಿಂದ ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ತೆರಳಿದ್ದರು. ಹೀಗಾಗಿ ವಿಮಾನ ಹತ್ತುವುದಕ್ಕೆ ಸಾಧ್ಯವಾಗಿರಲಿಲ್ಲ. ಇದು ಅವರ ಜೀವ ಉಳಿಯಲು ಕಾರಣವಾಯಿತು. ಈ ಬಗ್ಗೆ ಭೂಮಿ ಪ್ರತಿಕ್ರಿಯಿಸಿದ್ದು, ‘ ಆ ಹತ್ತು ನಿಮಿಷ ತಡವಾಗಿದ್ದ ಕಾರಣಕ್ಕೆ ವಿಮಾನ ಹತ್ತಲು ಆಗಲಿಲ್ಲ. ಇದನ್ನು ಹೇಗೆ ವಿವರಿಸಬೇಕೆಂದು ತಿಳಿಯುತ್ತಿಲ್ಲ. ನನ್ನ ದೇಹ ಅಕ್ಷರಶಃ ನಡು ಗುತ್ತಿದೆ. ದೇವರಿಗೆ ಕೃತಜ್ಞತೆ ಸಲ್ಲಿಸುವೆ’ ಎಂದು ಘಟನೆ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಬಿ.ಜೆ ಆಸ್ಪತ್ರೆಯ ಇಂಟರ್ನಿ ರೋಹನ್ ಬಗಾಡೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ರೋಹನ್ ದುರಂತ ನಡೆದ ಹಾಸ್ಟೆಲ್‌ನಲ್ಲಿದ್ದರು. ದುರಂತಕ್ಕೂ ಕೇವಲ 15 ನಿಮಿಷದ ಮುನ್ನ ಊಟ ಮಾಡಿ ಮೆಸ್‌ನಿಂದ ತೆರಳಿ ಜೀವ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ರೋಹನ್ ಪ್ರತಿಕ್ರಿಯಿಸಿದ್ದು, ‘ ನಾನು ಇನ್ನು 15 ನಿಮಿಷಗಳ ಕಾಲ ಆ ಸ್ಥಳದಲ್ಲೇ ಇದ್ದಿದ್ದರೆ ಗಾಯಗೊಂಡ ಅನೇಕರಲ್ಲಿ ನಾನೂ ಒಬ್ಬನಾಗುತ್ತಿದೆ. ಆಗಷ್ಟೇ ಮೆಸ್‌ನಲ್ಲಿ ಊಟ ಮುಗಿಸಿ ಹಾಸ್ಟೆಲ್‌ಗೆ ತೆರಳಿದ್ದೆ. ಆಗದೊಡ್ಡ ಶಬ್ದ ಕೇಳಿಸಿತು ಹೊರ ಬಂದು ನೋಡಿದಾಗ ಆಕಾಶ ಕಪ್ಪು ಹೊಗೆಯಿಂದ ತುಂಬಿ ಹೋಗಿತ್ತು’ ಎಂದಿದ್ದಾರೆ.

PREV

Recommended Stories

ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !
ಕೇರಳದ 2 ರು. ಡಾಕ್ಟರ್ ನಿಧನ