ಬಿಹಾರದ 74 ಲಕ್ಷ ಮತದಾರರ ಹುಡುಕಿಕೊಡಿ : ಪಕ್ಷಗಳಿಗೆ ಮನವಿ

KannadaprabhaNewsNetwork |  
Published : Jul 22, 2025, 12:15 AM ISTUpdated : Jul 22, 2025, 06:15 AM IST
voter list update 2025 online registration for migrants

ಸಾರಾಂಶ

ಬಿಹಾರದಲ್ಲಿ   ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ, ನಾಪತ್ತೆಯಾಗಿರುವ ಅಂದಾಜು 74 ಲಕ್ಷ ಮತದಾರರನ್ನು ಹುಡುಕಿಕೊಡಿ ಎಂದು ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿದೆ.  

ನವದೆಹಲಿ: ಬಿಹಾರದಲ್ಲಿ  ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ, ನಾಪತ್ತೆಯಾಗಿರುವ ಅಂದಾಜು 74 ಲಕ್ಷ ಮತದಾರರನ್ನು ಹುಡುಕಿಕೊಡಿ ಎಂದು ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿದೆ. ರಾಜ್ಯದಲ್ಲಿ ಅಕ್ರಮ ವಲಸಿಗರು, ಅಕ್ರಮ ಮತದಾರರ ಪಟ್ಟಿ ತೆರವಿಗೆ ಕಾರ್ಯಾಚರಣೆ ನಡೆಸುತ್ತಿರುವ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿದೆ.

ಸೋಮವಾರ ಆಯೋಗವು 12 ಪಕ್ಷಗಳ ಪ್ರತಿನಿಧಿಗಳನ್ನು ಭೇಟಿಯಾಗಿದ್ದು, ‘ದಾಖಲೆಗಳಲ್ಲಿ ನಮೂದಾಗಿರುವ ವಿಳಾಸಗಳಲ್ಲಿ 43.93 ಲಕ್ಷ ಜನ ವಾಸವಿಲ್ಲ. ಅತ್ತ ನಮ್ಮಿಂದ ಫಾರಂಗಳನ್ನು ಪಡೆದುಕೊಂಡು ಹೋಗಿರುವ 29.62 ಲಕ್ಷ ಜನರ ಪತ್ತೆಯೇ ಇಲ್ಲ. ಒಟ್ಟು 74 ಲಕ್ಷ ಜನರ ಕುರುಹೇ ಸಿಗುತ್ತಿಲ್ಲ’ ಎಂದು ಮಾಹಿತಿ ನೀಡಿದೆ. ಜತೆಗೆ, ಜಿಲ್ಲಾಧಿಕಾರಿಗಳು ಮತ್ತು ಪಕ್ಷಗಳು ನೇಮಿಸಿದ ಸುಮಾರು 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಮೂಲಕ ಈ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಸಹಕರಿಸುವಂತೆ ವಿನಂತಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಆಯೋಗವು, ‘ಯಾವೊಬ್ಬ ಅರ್ಹ ಮತದಾರನೂ ತಪ್ಪಿಹೋಗಬಾರದು ಎಂಬ ಉದ್ದೇಶದಿಂದ, ಈ ಕೆಲಸದಲ್ಲಿ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಲ್ಲಿ ಕೇಳಿಕೊಳ್ಳಲಾಗಿದೆ’ ಎಂದಿದೆ. ಆ.1ರಂದು ಕರಡು ಮತಪಟ್ಟಿ ಪ್ರಕಟವಾಗಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕಲಾಂಗೂ ಮುನ್ನ ರಾಷ್ಟ್ರಪತಿ ಹುದ್ದೆಗೆ ವಾಜಪೇಯಿ ಹೆಸರು!
ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ