ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಸುವ ಒಂದು ದೇಶ ಒಂದು ಎಲೆಕ್ಷನ್‌ ಬಿಲ್‌ ಸಂಸತ್ತಲ್ಲಿಂದು ಮಂಡನೆ

KannadaprabhaNewsNetwork |  
Published : Dec 17, 2024, 01:02 AM ISTUpdated : Dec 17, 2024, 04:32 AM IST
ಏಕ ಚುನಾವಣೆ | Kannada Prabha

ಸಾರಾಂಶ

 ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ. ಮಂಡನೆಯ ಬಳಿಕ ಉಭಯ ಸದನಗಳ ಜಂಟಿ ಸಮಿತಿ ಪರಾಮರ್ಶೆಗೆ ಈ ವಿಧೇಯಕವನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ.

 ನವದೆಹಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ. ಮಂಡನೆಯ ಬಳಿಕ ಉಭಯ ಸದನಗಳ ಜಂಟಿ ಸಮಿತಿ ಪರಾಮರ್ಶೆಗೆ ಈ ವಿಧೇಯಕವನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ.

‘ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸದನದಲ್ಲಿ ಮಸೂದೆ ಮಂಡಿಸಲಿದ್ದಾರೆ. ಬಳಿಕ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ, ‘ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಇದನ್ನು ವಹಿಸಿ’ ಎಂದು ಕೋರಲಿದ್ದಾರೆ. ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಅನುಪಾತದ ಆಧಾರದ ಮೇಲೆ ಜಂಟಿ ಸಮಿತಿಯನ್ನು ರಚಿಸಲಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮುನ್ನ ಸೋಮವಾರ ವಿಧೇಯಕ ಮಂಡಿಸಲು ಉದ್ದೇಶಿಸಲಾಗಿತ್ತು. ಆದರೆ ಪೂರಕ ಅಂದಾಜುಗಳು ಅಂಗೀಕಾರ ಆಗಬೇಕಿದ್ದ ಕಾರಣ ಮಂಡನೆಯನ್ನು ಮುಂದೂಡಲಾಗಿತ್ತು. ಈ ನಡುವೆ, ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸದನದಲ್ಲಿ ಅನುಪಸ್ಥಿತರಿದ್ದ ಕಾರಣಕ್ಕೂ ಸೋಮವಾರ ಮಸೂದೆ ಮಂಡನೆ ಮಾಡಿರಲಿಲ್ಲ ಎಂದು ಮೂಲಗಳು ಹೇಳಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶಬರಿಮಲೆ ಚಿನ್ನಕನ್ನ: ಕಾಂತಾರ ನಟಗೆ ಇ.ಡಿ. ಸಮನ್ಸ್‌
ಐಎಎಸ್‌, ಐಎಫ್ಎಸ್‌ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್‌ ಇಲ್ಲ- ಯುಪಿಎಸ್ಸಿ ನಿಯಮ ಬದಲು