ಇಂದು 90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ : 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

KannadaprabhaNewsNetwork |  
Published : Oct 05, 2024, 01:33 AM ISTUpdated : Oct 05, 2024, 05:21 AM IST
ಹರ್ಯಾಣ | Kannada Prabha

ಸಾರಾಂಶ

90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ.  ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್‌ ಫೋಗಟ್‌, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಚಂಡೀಗಢ: 90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ. 2 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್‌ ಫೋಗಟ್‌, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ದಶಕದ ನಂತರ ಕಾಂಗ್ರೆಸ್ ಪುನರಾಗಮನದ ನಿರೀಕ್ಷೆಯಲ್ಲಿದೆ. ಅ.8 ರಂದು ಮತ ಎಣಿಕೆ ನಡೆಯಲಿದೆ.8,821 ಶತಾಯುಷಿಗಳು ಸೇರಿ 2,03,54,350 ಮತದಾರಿದ್ದಾರೆ. 101 ಮಹಿಳೆಯರು ಸೇರಿ 1,031 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈ ಪೈಕಿ 464 ಅಭ್ಯರ್ಥಿಗಳು ಪಕ್ಷೇತರರರು. 20,632 ಮತಗಟ್ಟೆ ಸ್ಥಾಪಿಸಲಾಗಿದೆ.

ಬಿಜೆಪಿ, ಕಾಂಗ್ರೆಸ್, ಎಎಪಿ, ಐಎನ್‌ಎಲ್‌ಡಿ-ಬಿಎಸ್‌ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷಗಳು ಕಣದಲ್ಲಿರುವ ಪ್ರಮುಖ ಪಕ್ಷಗಳು.2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಆದರೆ ಈಗ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ ಮುರಿದುಕೊಂಡು ಪ್ರತ್ಯೇಕವಾಗಿ ಸ್ಪರ್ಧಿಸಿವೆ.

ಇಂದು ಸಂಜೆ ಚುನಾವಣೋತ್ತರ ಸಮೀಕ್ಷೆ ಪ್ರಕಟ

ನವದೆಹಲಿ: ಶನಿವಾರ ಸಂಜೆ ಹರ್ಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 3 ಹಂತದಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ- ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ