ಬಿಜೆಪಿ ನವ ಕಾರ್ಯಾಧ್ಯಕ್ಷ ನಿತಿನ್‌ ಶಾಸಕ ಸ್ಥಾನ ಬಿಟ್ಟು ರಾಜ್ಯಸಭೆಗೆ?

KannadaprabhaNewsNetwork |  
Published : Dec 22, 2025, 02:00 AM IST
Nithin

ಸಾರಾಂಶ

ಇತ್ತೀಚೆಗಷ್ಟೇ ಬಿಜೆಪಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಹಾರದ ನಿತಿನ್‌ ನಬೀನ್‌ ಅವರಿಗೆ ರಾಜ್ಯಸಭೆಗೆ ಪದೋನ್ನತಿ ನೀಡಲು ಪಕ್ಷದ ಹೈಕಮಾಂಡ್‌ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಬಂಕಿಪುರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ನವದೆಹಲಿ: ಇತ್ತೀಚೆಗಷ್ಟೇ ಬಿಜೆಪಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಹಾರದ ನಿತಿನ್‌ ನಬೀನ್‌ ಅವರಿಗೆ ರಾಜ್ಯಸಭೆಗೆ ಪದೋನ್ನತಿ ನೀಡಲು ಪಕ್ಷದ ಹೈಕಮಾಂಡ್‌ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಬಂಕಿಪುರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಮುಂದಿನ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸುವ  ನತಿನ್‌ 

ಮುಂದಿನ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ನತಿನ್‌ ಅಲಂಕರಿಸುವವರಿದ್ದಾರೆ ಎನ್ನಲಾಗುತ್ತಿದ್ದು, ಅದಕ್ಕೂ ಮೊದಲು ಈ ಬದಲಾವಣೆಯಾಗುವ ನಿರೀಕ್ಷೆಯಿದೆ. ಡಿ.14ರಂದು 45 ವರ್ಷದ ಇವರನ್ನು ಬಿಜೆಪಿಯ ಕಾರ್ಯಾಧ್ಯಕ್ಷರಾಗಿ ದಿಢೀರನೆ ನೇಮಿಸಲಾಗಿತ್ತು. ಅದಾದ 2 ದಿನದ ಬಳಿಕ(ಡಿ.16) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಶಾಸಕ ಸ್ಥಾನದಲ್ಲಿ ಮುಂದುವರೆದಿದ್ದರು. ಇದೀಗ ಅದನ್ನೂ ಬಿಟ್ಟು ರಾಜ್ಯಸಭೆಗೆ ಹೋಗಲಿದ್ದಾರೆ. ಈ ಮೂಲಕ, ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿರುವವರು ರಾಜ್ಯಸಭಾ ಸದಸ್ಯರೂ ಆಗಿರುವ ಸಂಪ್ರದಾಯವನ್ನು ಮುಂದುವರೆಸಲಿದ್ದಾರೆ. ಪ್ರಸ್ತುತ ಪಕ್ಷದ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರೂ ರಾಜ್ಯಸಭೆಯ ಚುನಾಯಿತ ಸದಸ್ಯರಾಗಿದ್ದಾರೆ.

ರಾಜ್ಯಸಭೆಯಲ್ಲಿ ಬಿಹಾರ:

ಮುಂದಿನ ವರ್ಷ ಏಪ್ರಿಲ್‌ನಲ್ಲಿ ಬಿಹಾರದ 5 ರಾಜ್ಯಸಭಾ ಸಂಸದರ ಅವಧಿ ಮುಗಿಯಲಿದ್ದು, ಅವರ ಸೀಟುಗಳು ಖಾಲಿ ಆಗಲಿವೆ. ಬಿಹಾರದಿಂದ ರಾಜ್ಯಸಭಾ ಸದಸ್ಯರಾಗಲು 41 ಶಾಸಕರ ಬೆಂಬಲ ಅಗತ್ಯ. ಆದರೆ ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 89 ಸೀಟುಗಳನ್ನು ತನ್ನದಾಗಿಸಿಕೊಂಡಿರುವುದರಿಂದ ನಿತಿನ್‌ ನಬೀನ್‌ರನ್ನು ರಾಜ್ಯಸಭೆಗೆ ಕಳಿಸುವುದು ಕಷ್ಟವಾಗಲಿಕ್ಕಿಲ್ಲ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಫಾಸ್ಟ್ಯಾಗ್‌ ದಂಡದಲ್ಲಿ ಕರ್ನಾಟಕ ನಂ.1
ರೈಲ್ವೆ ಟಿಕೆಟ್‌ ದರ ಅಲ್ಪ ಹೆಚ್ಚಳ