ಪಿಎಂ ಕಿಸಾನ್‌ ನಿಧಿ ಮೊತ್ತ 9000 ರು.ಗೆ ಹೆಚ್ಚಳ?

KannadaprabhaNewsNetwork |  
Published : Jan 30, 2024, 02:04 AM ISTUpdated : Jan 30, 2024, 02:18 PM IST
ಕೇಂದ್ರ ಬಜೆಟ್‌ | Kannada Prabha

ಸಾರಾಂಶ

ಕೃಷಿ ಚಟುವಟಿಕೆಗಳಿಗೆ ನೆರವಾಗಲು ರೈತರಿಗೆ ವಾರ್ಷಿಕವಾಗಿ ನೀಡುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಕೇಂದ್ರ ಸರ್ಕಾರ 6000 ರು.ನಿಂದ 9000 ರು.ಗೆ ಹೆಚ್ಚಿಸುವ ಸಾಧ್ಯತೆ ಇದೆ.

ನವದೆಹಲಿ: ಕೃಷಿ ಚಟುವಟಿಕೆಗಳಿಗೆ ನೆರವಾಗಲು ರೈತರಿಗೆ ವಾರ್ಷಿಕವಾಗಿ ನೀಡುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಕೇಂದ್ರ ಸರ್ಕಾರ 6000 ರು.ನಿಂದ 9000 ರು.ಗೆ ಹೆಚ್ಚಿಸುವ ಸಾಧ್ಯತೆ ಇದೆ.

ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, 2024ರ ಲೋಕಸಭಾ ಚುನಾವಣೆಗೂ ಮುನ್ನಾ ಮಂಡಿಸಲಿರುವ ಕಡೆಯ ಬಜೆಟ್‌ನಲ್ಲಿ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಶೇ.50ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಾಲಿ ತಲಾ 2000 ರು.ನಂತೆ ಮೂರು ಕಂತುಗಳಲ್ಲಿ ರೈತರ ಬ್ಯಾಂಕ್‌ ಖಾತೆಗೆ ಸರ್ಕಾರ ಒಟ್ಟು 6000 ರು. ಹಾಕುತ್ತಿದೆ. 

ಅದನ್ನು ತಲಾ 3000 ರು.ನಂತೆ ಒಟ್ಟು 9000 ರು.ಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

PREV

Recommended Stories

ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ