ಚೆನ್ನೈ: ರಸ್ತೆಗಳಲ್ಲಿ ಬೈಕ್ ಸ್ಟಂಟ್ ಮಾಡುವವರ ಬೈಕ್‌ಗಳನ್ನು ಸುಟ್ಟು ಹಾಕಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ವೀಲಿಂಗ್ ಪ್ರಕರಣವೊಂದರಲ್ಲಿ ಬಂಧಿತನಾಗಿರುವ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಜಾ ಮಾಡಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಯೂಟ್ಯೂಬರ್ ಟಿಟಿಎಫ್ ವಾಸನ್ ಬೆಂಗಳೂರು ಚೆನ್ನೈ ರಸ್ತೆಯಲ್ಲಿ ವೀಲಿಂಗ್ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್ ಅವರನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಸಲ್ಲಿಕೆಯಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ, ರಸ್ತೆಯಲ್ಲಿ ಇಂತಹ ಸಾಹಸಗಳನ್ನು ಮಾಡುವ ಮೂಲಕ ಇತತರಿಗೆ ಪ್ರೋತ್ಸಾಹ ನೀಡುತ್ತಾರೆ ಎಂದು ಹೇಳಿದ ಕೋರ್ಟ್ ಜಾಮೀನು ನಿರಾಕರಿಸಿತು. ಅಲ್ಲದೇ ವಾಸನ್ ಅವರ ಯೂಟ್ಯೂಬ್ ಚಾನಲ್ ಬಂದ್ ಮಾಡುವುದಲ್ಲದೇ, ಅವರ ಬೈಕನ್ನು ಸುಟ್ಟುಹಾಕಬೇಕು ಎಂದು ಹೇಳಿತು. ವಾಸನ್ ಯೂಟ್ಯೂಬ್‌ನಲ್ಲಿ 45 ಲಕ್ಷ ಫಾಲೋವರ್‌ಗಳನ್ನು ಹೊಂದಿದ್ದು, ರಸ್ತೆಯಲ್ಲಿ ಇಂತಹ ಸಾಹಸಗಳನ್ನು ಮಾಡುವ ಮೂಲಕ ಯುವ ಜನಾಂಗವನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಸರ್ಕಾರಿ ವಕೀಲರು ವಾದಿಸಿದರು.