ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬರು ವಿವಾಹದ ತನ್ನ ಆಫರ್ ತಿರಸ್ಕರಿಸಿದ ಟೀವಿ ನಿರೂಪಕನನ್ನು ಬಂಧಿಸಿದ ಘಟನೆ ತೆಲಂಗಾಣದ ರಾಜಧಾನಿ ಹೈದ್ರಾಬಾದ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಭೋಗಿರೆಡ್ಡಿ ತ್ರಿಶ್ನಾ ಎಂಬ ಉದ್ಯಮಿಯನ್ನು ಬಂಧಿಸಿದ್ದಾರೆ.
ಆದರೆ ಆತ ಈಕೆಯ ಮದುವೆಯ ಪ್ರಸ್ತಾಪ ತಿರಸ್ಕರಿಸಿ, ಆಕೆಯ ನಂಬರ್ ಬ್ಲಾಕ್ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಹಿಳೆ ನಿರೂಪಕನ ಕಾರಿನಲ್ಲಿ ಟ್ರ್ಯಾಕಿಂಗ್ ಸಾಧನ ಅಳವಡಿಸಿ, ನಾಲ್ವರ ಸಹಾಯದಿಂದ ಆ್ಯಂಕರ್ ಅಪಹರಿಸಿ ತನ್ನ ಕಚೇರಿಯಲ್ಲಿ ಹಲ್ಲೆ ನಡೆಸಿದ್ದಾಳೆ. ನಂತರ ಆಕೆಯ ಕರೆಗೆ ಪ್ರತಿಕ್ರಿಯಿಸುವುದಾಗಿ ಭರವಸೆ ನೀಡಿದ ಬಳಿಕ ಬಿಟ್ಟು ಕಳುಹಿಸಿದ್ದಾಳೆ. ಹೀಗೆ ಹೊರಬಂದ ಆತ ಕೇಸು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.