ರಾಹುಲ್‌ ಗಾಂಧಿ ಕೇರಳದ ವಯನಾಡು ಭೂಕುಸಿತ ಬಗ್ಗೆ ಒಮ್ಮೆಯೂ ಮಾತೇ ಆಡಿಲ್ಲ: ತೇಜಸ್ವಿ ಸೂರ್ಯ

KannadaprabhaNewsNetwork |  
Published : Aug 01, 2024, 12:16 AM ISTUpdated : Aug 01, 2024, 10:13 AM IST
ತೇಜಸ್ವಿ | Kannada Prabha

ಸಾರಾಂಶ

ಕೇರಳದ ವಯನಾಡು ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್‌ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

 ನವದೆಹಲಿ :  ಕೇರಳದ ವಯನಾಡು ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್‌ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಇದು ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿ, ಕಲಾಪವನ್ನು ಕೆಲ ಕಾಲ ಮುಂದೂಡಲಾಗಿತ್ತು.

ದೇಶದ ವಿವಿಧೆಡೆಗಳಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಉಂಟಾದ ಹಾನಿಯ ಬಗ್ಗೆ ಬುಧವಾರ ಗಮನ ಸೆಳೆಯುವ ಸೂಚನೆಯ ಮೇಲೆ ಮಾತನಾಡಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ‘ವಯನಾಡ್‌ ಸಂಸದರಾಗಿದ್ದಾಗ ರಾಹುಲ್‌ ಗಾಂಧಿ ಒಮ್ಮೆಯೂ ಸಂಸತ್ತಿನಲ್ಲಿ ಭೂಕುಸಿತದ ಬಗ್ಗೆ ಮಾತನಾಡಲಿಲ್ಲ. ಕೇರಳದ ವಿಪತ್ತು ಪರಿಹಾರ ಏಜೆನ್ಸಿಗಳು ವಯನಾಡಿನಲ್ಲಿ ಅಕ್ರಮ ಅರಣ್ಯ ಒತ್ತುವರಿಗಳನ್ನು ಧಾರ್ಮಿಕ ಸಂಸ್ಥೆಗಳ ಒತ್ತಡದಿಂದಾಗಿ ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದವು. ಇದನ್ನೇ ಅಲ್ಲಿನ ಅರಣ್ಯ ಸಚಿವರೂ ಸದನಕ್ಕೆ ತಿಳಿಸಿದ್ದರು’ ಎಂದು ಆಕ್ಷೇಪಿಸಿದರು.

ಅವರ ಮಾತಿಗೆ ಕಾಂಗ್ರೆಸ್‌ ಸಂಸದರು ಪ್ರತಿಭಟನೆ ಆರಂಭಿಸಿದರು. ಹೀಗಾಗಿ ಲೋಕಸಭೆಯ ಕಲಾಪವನ್ನು ಸಂಜೆ 4 ಗಂಟೆಯವರೆಗೆ ಕೆಲ ಕಾಲ ಮುಂದೂಡಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ- ಇರಾನ್‌ ಯುದ್ಧ! ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಅಟ್ಯಾಕ್‌!
ಅಕ್ಕಪಕ್ಕದ ದೇಶಗಳಿಗೂ ಯುದ್ಧದ ಕೊಳ್ಳಿ