ಮುಂಬೈ: ಬಿಜೆಪಿ-ಶಿವಸೇನೆ (ಶಿಂಧೆ ಬಣ)- ಎನ್‌ಸಿಪಿ (ಅಜಿತ್ ಪವಾರ್) ಬಣಗಳನ್ನು ಒಳಗೊಂಡ ಮಹಾರಾಷ್ಟ್ರದ ಮಹಾಯುತಿ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಏಕನಾಥ ಶಿಂಧೆ ಅವರೇ ಬಿಂಬಿತವಾಗುವ ಸಾಧ್ಯತೆ ಇದೆ. ಈ ಕುರಿತಂತೆ ಬಿಜೆಪಿ ನಾಯಕ ಹಾಗೂ ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು ಸುಳಿವು ನೀಡಿದ್ದಾರೆ.
ಶಿಂಧೆ ಅವರನ್ನೇ ಮುಖ್ಯಮಂತ್ರಿ ಎಂದು ಬಿಂಬಿಸಿ ಮಹಾರಾಷ್ಟ್ರದಲ್ಲಿ ಹೆಚ್ಚು ವಿಧಾನಸಭೆ ಸೀಟುಗಳಲ್ಲಿ ಸ್ಪರ್ಧೆ ಮಾಡುವ ಒಲವು ಬಿಜೆಪಿಯಲ್ಲಿ ಇದ್ದಂತಿದೆ. ಇದಕ್ಕೆ ಇಂಬು ನೀಡುವಂತೆ ವಿಧಾನಸಭೆ ಚುನಾವಣೆ ಸ್ಥಾನ ಹೊಂದಾಣಿಕೆಗೆ ಸಂಬಂಧಿಸಿದಂತೆ ಏಕನಾಥ ಶಿಂಧೆ ಅವರು ತ್ಯಾಗ ಮಾಡಲು ಸಿದ್ಧರಿರಬೇಕು. ಒಕ್ಕೂಟ ಗಟ್ಟಿಯಾಗಿರಲು ಬಿಜೆಪಿ ಮಾಡಿದ ರೀತಿಯಲ್ಲೇ ಅವರು ತ್ಯಾಗ ಮಾಡಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವನ್‌ಕುಲೆ ಅವರು ಹೇಳಿದ್ದಾರೆ.