ಆದಿವಾಸಿ ಮಹಿಳೆಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಲೈಂಗಿಕ ಕಿರುಕುಳ : ಮಸೀದಿ, ಮನೆಗಳಿಗೆ ಬೆಂಕಿ

KannadaprabhaNewsNetwork |  
Published : Sep 05, 2024, 12:37 AM ISTUpdated : Sep 05, 2024, 04:32 AM IST
ಲೈಂಗಿಕ ಕಿರುಕುಳ  | Kannada Prabha

ಸಾರಾಂಶ

ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ.

ಹೈದರಾಬಾದ್‌: ಆದಿವಾಸಿ ಮಹಿಳೆಯೊಬ್ಬಳಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಮತ್ತು ಈ ಸಂಬಂಧ ನಡೆದ ಪ್ರತಿಭಟನೆ ಕೋಮುಗಲಭೆ ಸ್ವರೂಪ ಪಡೆದ ಘಟನೆ ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ನಡೆದಿದೆ.

ಈ ಕೋಮು ಹಿಂಸಾಚಾರದ ವೇಳೆ 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಗ್ರಾಮದ ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ. ಘಟನೆ ಕುರಿತು ಹೈದ್ರಾಬಾದ್‌ ಸಂಸದ ಅಸಾದುದ್ದೀನ್‌ ಒವೈಸಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಹಿನ್ನೆಲೆ:

ಆಸಿಫಾಬಾದ್ ಜಿಲ್ಲೆಯ ಜೈನೂರ್‌ ಮಂಡಲದಲ್ಲಿ ಮುಸ್ಲಿಂ ಆಟೋರಿಕ್ಷಾ ಚಾಲಕನೊಬ್ಬ ಬುಡಕಟ್ಟು ಮಹಿಳೆಯ ಮೇಲೆ ಲೈಗಿಂಕ ದೌರ್ಜನ್ಯವೆಸಗಿದ್ದ. ಇದನ್ನು ಖಂಡಿಸಿ ಬುಧವಾರ ಬಂದ್‌ಗೆ ಕರೆ ನೀಡಲಾಗಿತ್ತು. ಈ ವೇಳೆ 2000 ಜನರ ಗುಂಪೊಂದು ಜೈನೂರ್‌ ಗ್ರಾಮದ ಮೇಲೆ ಏಕಾಏಕಿ ಮಸೀದಿ, ಮನೆಗಳ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸ್ಟಾರ್‌ವಾರ್‌ ರೀತಿ ಲೇಸರ್‌ ಅಸ್ತ್ರ ರಾಜ್ಯದಲ್ಲಿ ಅಭಿವೃದ್ಧಿ!
ಗೌರಿ ಲಂಕೇಶ್‌ ಹತ್ಯೆ ಆರೋಪಿ ಮಹಾರಾಷ್ಟ್ರ ಪಾಲಿಕೆ ಚುನಾವಣೆಗೆ