ಹೈದರಾಬಾದ್: ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆ ಹಾಗೂ 500 ರು.ಗೆ ರಿಯಾಯ್ತಿ ದರದಲ್ಲಿ ನೀಡುವ ಅಡುಗೆ ಅನಿಲ ಯೋಜನೆಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಸಂಪುಟ ಸಚಿವರು ಮಂಗಳವಾರ ಚಾಲನೆ ನೀಡಿದರು.
ಈ ಮೊದಲು ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ‘ಮಹಾಲಕ್ಷ್ಮೀ ಯೋಜನೆ’ ಹಾಗೂ 10 ಲಕ್ಷ ರು.ವರೆಗಿನ ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಿದ್ದರು.ತೆಲಂಗಾಣದ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ 6 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.