ಕೇರಳ ಕಾಂಗ್ರೆಸ್ಸಿಗ ಕರುಣಾಕರನ್‌ ಪುತ್ರಿ ಪದ್ಮಜಾ ಬಿಜೆಪಿಗೆ

KannadaprabhaNewsNetwork |  
Published : Mar 08, 2024, 01:50 AM IST
ಪದ್ಮಜಾ | Kannada Prabha

ಸಾರಾಂಶ

ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್‌ ಪುತ್ರಿ ಪದ್ಮಜಾ ವೇಣುಗೋಪಾಲ್‌ ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿ ಸೇರಿದ್ದಾರೆ.

ನವದೆಹಲಿ: ಕಾಂಗ್ರೆಸ್‌ ಹಿರಿಯ ಧುರೀಣ, ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್‌ ಕಾಂಗ್ರೆಸ್‌ ತೊರೆದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಇದು ಕೇರಳದಲ್ಲಿ ಬಿಜೆಪಿಗೆ ಆನೆಬಲ ತಂದಿದೆ.

ಈ ಬಗ್ಗೆ ಮಾತನಾಡಿದ ಪದ್ಮಜಾ ‘ಕಾಂಗ್ರೆಸ್‌ ಪಕ್ಷದ ಕುರಿತಾಗಿ ನನಗೆ ಕಳೆದ ವಿಧಾನಸಭಾ ಚುನಾವಣೆಯಿಂದಲೂ ಅಸಮಾಧಾನ ಇತ್ತು. ಹಿರಿಯ ನಾಯಕಿ ಸೋನಿಯಾ ಗಾಂಧಿ ಕುರಿತು ಅಪಾರ ಗೌರವವಿದ್ದರೂ ನನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರ ಭೇಟಿಗೆ ಅವಕಾಶವನ್ನೇ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷ ತೊರೆದಿದ್ದೇನೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿಂದೂರದ ವೇಳೆ ಅಡಗಲು ಸೂಚನೆ ಇತ್ತು: ಜರ್ದಾರಿ
2025 ಸಾರ್ಥಕ ವರ್ಷ: ಮನ್‌ ಕಿ ಬಾತ್‌ನಲ್ಲಿ ಮೋದಿ