ಇಂದು ಕಾಂಗ್ರೆಸ್‌ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ

KannadaprabhaNewsNetwork |  
Published : Mar 07, 2024, 01:45 AM ISTUpdated : Mar 07, 2024, 12:19 PM IST
ಕಾಂಗ್ರೆಸ್‌ ಪ್ರಣಾಳಿಕೆ | Kannada Prabha

ಸಾರಾಂಶ

ಸೋನಿಯಾ, ರಾಹುಲ್‌, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್‌ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಇಲ್ಲಿ ಸಭೆ ಸೇರಲಿದೆ. 

ಈ ಸಭೆಯಲ್ಲಿ ಮೊದಲ ಪಟ್ಟಿ ಅಂತಿಮಗೊಳಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ್‌, ಅಂಬಿಕಾ ಸೋನಿ, ಅಧೀರ್‌ ರಂಜನ್‌ ಮೊದಲಾದ ನಾಯಕರು ಭಾಗಿಯಾಗಲಿದ್ದಾರೆ. 

ಖರ್ಗೆ ನೇತೃತ್ವದ ಸಭೆಯಲ್ಲಿ ಪ್ರತಿ ರಾಜ್ಯಗಳು ನೀಡಿರುವ ಪಟ್ಟಿಯನ್ನು ಪರಾಮರ್ಶೆ ನಡೆಸಿ ಅಂತಿಮ ಅಂಕಿತ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರದ ಆಡಳಿತಾರೂಢ ಬಿಜೆಪಿ ಈಗಾಗಲೇ 195 ಜನರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

PREV

Recommended Stories

ಉತ್ತರಾಖಂಡದಲ್ಲಿ ಮಳೆ ಆರ್ಭಟ, ಭೂಕುಸಿತ
₹200 ಕೋಟಿ ವಂಚನೆ : ಜಯಾ ಆಪ್ತೆ ಶಶಿಕಲಾ ಆಸ್ತಿ ಮೇಲೆ ಇಡಿ ದಾಳಿ