ನವದೆಹಲಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಮಾ.7ರಂದು ತನ್ನ ಸಭೆ ನಡೆಡಲಿದೆ.
ಈ ಸಮಿತಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಸಹ ಇದ್ದಾರೆ.
ಈ ಸಮಿತಿಗೆ ರಾಜ್ಯಗಳು ಆಯಾ ಕ್ಷೇತ್ರಗಳಿಗೆ ಟಿಕೆಟ್ ನೀಡಬಹುದಾದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿ ಕಳುಹಿಸಿದೆ.ಈ ಸಮಿತಿ ಪಟ್ಟಿಯನ್ನು ಪರಾಮರ್ಶೆ ನಡೆಸಿ ಪ್ರಕಟ ಮಾಡಲಿದೆ. ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.