ಬಿರ್ಲಾ ಕಚೇರಿಗೆ ನುಗ್ಗಿ ಕಾಂಗ್ರೆಸ್ಸಿಗರ ಬೆದರಿಕೆ: ರಿಜಿಜು ವಿಡಿಯೋ

KannadaprabhaNewsNetwork |  
Published : Feb 13, 2026, 03:00 AM IST
Kiren Rijiju

ಸಾರಾಂಶ

ಸಂಸತ್ತಿನಲ್ಲಿ ಇತ್ತೀಚೆಗೆ ವಿರೋಧ ಪಕ್ಷ ಮತ್ತು ಸರ್ಕಾರದ ನಡುವೆ ನಡೆದ ಘರ್ಷಣೆಯ ಸಂದರ್ಭದಲ್ಲಿ 20-25 ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ನುಗ್ಗಿ ಅವರನ್ನು ನಿಂದಿಸಿ ಪ್ರಧಾನಿಗೆ ಬೆದರಿಕೆ ಹಾಕಿದ್ದರು ಎಂದು ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಗುರುವಾರ ಆರೋಪಿಸಿದ್ದಾರೆ.

ನವದೆಹಲಿ: ಸಂಸತ್ತಿನಲ್ಲಿ ಇತ್ತೀಚೆಗೆ ವಿರೋಧ ಪಕ್ಷ ಮತ್ತು ಸರ್ಕಾರದ ನಡುವೆ ನಡೆದ ಘರ್ಷಣೆಯ ಸಂದರ್ಭದಲ್ಲಿ 20-25 ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ನುಗ್ಗಿ ಅವರನ್ನು ನಿಂದಿಸಿ ಪ್ರಧಾನಿಗೆ ಬೆದರಿಕೆ ಹಾಕಿದ್ದರು ಎಂದು ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಗುರುವಾರ ಆರೋಪಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್ಸಿಗರೇ ಚಿತ್ರಿಸಿದ್ದರು ಎನ್ನಲಾದ ವಿಡಿಯೋವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ‘ಈ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಇದ್ದರು. ತಮ್ಮ ಸಂಸದರ ವರ್ತನೆ ನೋಡಿ ಸುಮ್ಮನಿದ್ದರು’ ಎಂದಿದ್ದಾರೆ. ಆದರೆ ಈ ಆರೋಪ ಸುಳ್ಳು ಎಂದು ಪ್ರಿಯಾಂಕಾ ಸ್ಪಷ್ಟಪಡಿಸಿದ್ದಾರೆ.

 ಗದ್ದಲಕ್ಕೆ ಲೋಕಸಭೆ ಕಲಾಪ ಬಲಿ 

ನವದೆಹಲಿ: ರಾಹುಲ್‌ ಗಾಂಧಿ ಅವರ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಮಾಡಿದ ಆರೋಪದ ಕಾರಣ ಲೋಕಸಭೆಯಲ್ಲಿ ವಿಪಕ್ಷಗಳಿಂದ ಭಾರೀ ಗದ್ದಲ ಉಂಟಾಗಿದ್ದು, ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ. ಇದರೊಂದಿಗೆ ಗುರುವಾರ 2 ಬಾರಿ ಕಲಾಪ ಮುಂದೂಡಲ್ಪಟ್ಟಿದೆ.

ರಾಹುಲ್‌ ಅವರು ದೇಶವಿರೋಧಿ ಶಕ್ತಿಗಳೊಂದಿಗೆ ಸಂಪರ್ಕದಲ್ಲಿ

ಶೂನ್ಯ ವೇಳೆಯಲ್ಲಿ ಮಾತನಾಡತೊಡಗಿದ ದುಬೆ, ‘ರಾಹುಲ್‌ ಅವರು ದೇಶವಿರೋಧಿ ಶಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಆರೋಪ ಮಾಡಿದರು. ಇದಕ್ಕೆ ಪ್ರತಿಯಾಗಿ ವಿಪಕ್ಷದ ಸಂಸದರು ಗದ್ದಲ ಆರಂಭಿಸಿದರು. ಪರಿಣಾಮವಾಗಿ ಸ್ಪೀಕರ್‌ ಹುದ್ದೆಯಲ್ಲಿದ್ದ ಟಿಡಿಪಿಯ ಕೃಷ್ಣಪ್ರಸಾದ್‌ ಟೆನೆಟಿ ಅವರು ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದರು.

ಇದಕ್ಕೂ ಮುನ್ನ ಪ್ರಶ್ನೋತ್ತರ ವೇಳೆಯಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಹಾಗೂ ಕಾರ್ಮಿಕ ಕಾನೂನುಗಳ ವಿರುದ್ಧ ವಿಪಕ್ಷಗಳು ಘೋಷಣೆ ಕೂಗತೊಡಗಿದ ಕಾರಣ ಕಲಾಪವನ್ನು ಮಧ್ಯಾಹ್ನದ ತನಕ ಮುಂದೆ ಹಾಕಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ರಾಗಾ ವಿರುದ್ಧ ಸಂಸತ್ತಲ್ಲಿ ಬಿಜೆಪಿಯ ಅನರ್ಹತೆ ಅಸ್ತ್ರ
7 ದಶಕಗಳ ಬಳಿಕಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ - ಇಂದು ‘ಸೇವಾ ತೀರ್ಥ’ ಉದ್ಘಾಟನೆ