ನವದೆಹಲಿ: ದೇಶದಲ್ಲಿ ಕೋವಿಡ್ ಭಾರಿ ಇಳಿಕೆ ಕಂಡಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 180 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.
ಸಕ್ರಿಯ ಪ್ರಕರಣಗಳ ಪ್ರಮಾಣವು 2804ಕ್ಕೆ ಇಳಿದಿದೆ.
ಈ ಸಕ್ರಿಯ ಪ್ರಕರಣಗಳಲ್ಲಿ ಶೇ.92ರಷ್ಟು ಜನರು ಮನೆಯಲ್ಲೇ ಇದ್ದು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ದೇಶದಲ್ಲಿ ಈವರೆಗೂ 4.50 ಕೋಟಿ ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ 4.44 ಕೋಟಿ ಮಂದಿ ಗುಣಮುಖರಾಗಿದ್ದಾರೆ ಹಾಗೂ 5.30 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.