ಅಶ್ಲೀಲ ಪದ ಬಳಸಿ ನಿಂದಿಸಿದ ಸಿ.ಟಿ.ರವಿ ಪ್ರತಿಕೃತಿ ದಹಿಸಿ ತುಮಕೂರಿನ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ

KannadaprabhaNewsNetwork |  
Published : Dec 21, 2024, 01:15 AM ISTUpdated : Dec 21, 2024, 04:51 AM IST
ತುಮಕೂರಿನಲ್ಲಿ ಸಿ.ಟಿ. ರವಿ ಪ್ರತಿಕೃತಿ ದಹಿಸಲಾಯಿತು. | Kannada Prabha

ಸಾರಾಂಶ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ.ರವಿ ವಿರುದ್ಧ ಶುಕ್ರವಾರ ಸಂಜೆ ತುಮಕೂರು ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

 ತುಮಕೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಸಿ.ಟಿ.ರವಿ ವಿರುದ್ಧ ಶುಕ್ರವಾರ ಸಂಜೆ ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಬಿಜಿಎಸ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು. 

ಸಿ.ಟಿ.ರವಿ ಪ್ರತಿಕೃತಿಗೆ ಮಹಿಳಾ ಕಾರ್ಯಕರ್ತೆಯರು ಪೊರಕೆಯಲ್ಲಿ ಹೊಡೆದು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿ ಪ್ರತಿಕೃತಿ ದಹನ ಮಾಡಿದರು.ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೇಮಠ, ಭಾರತ್ ಮಾತಾಕಿ ಜೈ ಎಂದು ಕೂಗುವ ಸಿ.ಟಿ.ರವಿ ಬಾಯಲ್ಲಿ ಸಚಿವೆ ಬಗ್ಗೆ ಅಶ್ಲೀಲ ಪದ ಬಂದಿದೆ. ಸಚಿವೆಯರನ್ನೇ ಅವಹೇಳನಾಕಾರಿಯಾಗಿ ನಿಂದಿಸಿದ ಇವರು ಸಾಮಾನ್ಯ ಹೆಣ್ಣು ಮಕ್ಕಳಿಗೆ ಇನ್ನೆಲ್ಲಿ ಗೌರವ ನೀಡುತ್ತಾರೆ? ನಮ್ಮದು ಸುಸಂಸ್ಕೃತ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯವರು ಮಹಿಳೆಯರಿಗೆ ತೋರುವ ಗೌರವ ಇದೆಯೆ? ಎಂದರು.

ಸಿ.ಟಿ.ರವಿ ತುಮಕೂರು ಜಿಲ್ಲೆಗೆ ಆಗಮಿಸಿದಾಗ ತಕ್ಕ ಶಾಸ್ತಿ ಮಾಡುತ್ತೇವೆ, ಮಹಿಳೆಯರು ಇವರ ಮುಖಕ್ಕೆ ಮಸಿ ಬಳಿಯುತ್ತಾರೆ. ಸಿ.ಟಿ.ರವಿ ಪದೇಪದೆ ಇಂತಹ ತಪ್ಪು ಮಾಡುತ್ತಿದ್ದಾರೆ, ಇನ್ನೂ ಬುದ್ಧಿ ಕಲಿತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೀತಾ ರಾಜಣ್ಣ ಮಾತನಾಡಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಟ್ಟ ಪದಗಳಿಂದ ನಿಂದನೆ ಮಾಡಿರುವ ಸಿ.ಟಿ.ರವಿ ಈ ನಾಡಿನ ಹೆಣ್ಣು ಮಕ್ಕಳಿಗೆ ಮಾಡಿದ ಅವಮಾನ. ಸಿ.ಟಿ.ರವಿಯನ್ನು ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಿ, ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದರು.

ಸಿ.ಟಿ.ರವಿ ಅಸಭ್ಯ ಪದ ಬಳಸಿರುವುದನ್ನು ಹಾಜರಿದ್ದ ಶಾಸಕರೇ ಹೇಳುತ್ತಾರೆ.ಇದೇ ಬಿಜಪಿಯವರು ಹಿಂದೆ ವಿಧಾನಸೌಧದ ಸದನದಲ್ಲಿ ಬ್ಲೂ ಫಿಲಂ ನೋಡುತ್ತಿದ್ದರು. ಇದು ಬಿಜೆಪಿಯವರ ಸಂಸ್ಕೃತಿ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ಟಿ.ಪಿ.ಮೋಹನ್‌ಕುಮಾರ್, ನಗರ ಅಧ್ಯಕ್ಷ ಆರ್ಮಾನ್, ಇಲಾಯಿ ಸಿಕಂದರ್, ಸಂಜು, ಮುಖಂಡರಾದ ನರಸೀಯಪ್ಪ, ವೈ.ಎನ್.ನಾಗರಾಜು. ಟಿ.ಎಂ.ಮಹೇಶ್, ಅಂಬರೀಷ್, ನಟರಾಜಶೆಟ್ಟಿ, ಚಂದ್ರಯ್ಯ, ಸಂಜೀವ್‌ಕುಮಾರ್, ಖಾದರ್ ಬಾಷಾ, ಸುಜಾತ, ಜಯಮ್ಮ, ಯಶೋಧ,ಕವಿತಾ, ನಾಗಮಣಿ, ಭಾಗ್ಯ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ