2 ಏರ್ಪೋರ್ಟ್‌, 7 ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

KannadaprabhaNewsNetwork |  
Published : May 13, 2024, 12:04 AM ISTUpdated : May 13, 2024, 04:44 AM IST
ಬಾಂಬ್‌ | Kannada Prabha

ಸಾರಾಂಶ

2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ನವದೆಹಲಿ: 2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಹಮದಾಬಾದ್‌ ವಿಮಾನ ನಿಲ್ದಾಣ, ಬುರಾರಿ ಆಸ್ಪತ್ರೆ ಹಾಗೂ ಸಂಜೀವ್‌ ಗಾಂಧಿ ಆಸ್ಪತ್ರೆ ಸೇರಿದಂತೆ ದೆಹಲಿ 7 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆಯ ಇ ಮೇಲ್‌ ರವಾನಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ, ಬಾಂಬ್‌ ನಿಷ್ಕ್ರಿಯ ದಳ ಸೇರಿದಂತೆ ಸ್ಥಳೀಯ ಪೊಲೀಸರು ಬಾಂಬ್‌ ಹುಡುಕಾಟ ನಡೆಸಿದ್ದು, ಯಾವುದೇ ರೀತಿಯ ಬಾಂಬ್ ಪತ್ತೆಯಾಗಿಲ್ಲ.

ಇತ್ತೀಚೆಗೆ ದೆಹಲಿ ಮತ್ತು ಸುತ್ತಮುತ್ತಲಿನ 250ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್‌ಗಳು ಬಂದಿದ್ದವು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!