ಪ್ರತಿಭಟನಾರ್ಥವಾಗಿ ಯಮುನೆಯಲ್ಲಿ ಸ್ನಾನ ಮಾಡಿದ ಬಿಜೆಪಿಗನಿಗೆ ಉಸಿರಾಟ ಸಮಸ್ಯೆ, ತುರಿಕೆ!

KannadaprabhaNewsNetwork |  
Published : Oct 27, 2024, 02:31 AM ISTUpdated : Oct 27, 2024, 04:57 AM IST
ಸಚ್‌ದೇವ | Kannada Prabha

ಸಾರಾಂಶ

ದಿಲ್ಲಿ ಆಪ್‌ ಸರ್ಕಾರದ ವಿರುದ್ಧ ಪ್ರತಿಭಟನಾರ್ಥವಾಗಿ ಕಲುಷಿತ ಯಮುನಾ ನದಿಯಲ್ಲಿ ಸ್ನಾನ ಮಾಡಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ದಿಲ್ಲಿ ಆಪ್‌ ಸರ್ಕಾರದ ವಿರುದ್ಧ ಪ್ರತಿಭಟನಾರ್ಥವಾಗಿ ಕಲುಷಿತ ಯಮುನಾ ನದಿಯಲ್ಲಿ ಸ್ನಾನ ಮಾಡಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಖದಲ್ಲಿ ತುರಿಕೆ, ಉಸಿರಾಟದಲ್ಲಿ ತೊಂದರೆ ಮತ್ತು ಚರ್ಮ ವ್ಯಾಧಿಯಿಂದ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಗುರುವಾರ ಸಚ್‌ದೇವ ಯಮುನೆಯಲ್ಲಿ ಮುಳುಗಿ ಎದ್ದು ಪ್ರತಿಭಟಿಸಿದ್ದರು. ಇವರ ನಡೆಯನ್ನು ಆಪ್‌ ತೀಕ್ಷವಾಗಿ ಖಂಡಿಸಿ, ಬಿಜೆಪಿ ಮಾಲಿನ್ಯದ ಬಗ್ಗೆ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸುಪ್ರೀಂನಲ್ಲಿ ವಕೀಲೆ ಆದ ಬಂಗಾಳದ ಮುಖ್ಯಮಂತ್ರಿ ದೀದಿ!
7 ಲಕ್ಷ ಸೇಬು ಮರ ಉಳಿಸಲು ಚಿಪ್ಕೋ ಚಳವಳಿ : 3 ಕಾಶ್ಮೀರ ರೈಲ್ವೆಗಳ ರದ್ದು