ದೆಹಲಿಗೆ ಇಂದು ರೈತರ ಪ್ರವೇಶ: ಬಂದೋಬಸ್ತ್‌

KannadaprabhaNewsNetwork | Updated : Mar 06 2024, 07:51 AM IST

ಸಾರಾಂಶ

ಬುಧವಾರದಂದು ರೈತರು ದೆಹಲಿ ಚಲೋಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಸುತ್ತಮುತ್ತಲಿನ ಆಯಕಟ್ಟಿನ ಪ್ರದೇಶಗಳಲ್ಲಿ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಬುಧವಾರ ದೆಹಲಿ ಚಲೋಗೆ ಕರೆ ಕೊಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯ ಗಡಿಗಳೂ ಸೇರಿದಂತೆ ಎಲ್ಲ ಜನನಿಬಿಡ ಪ್ರದೇಶಗಳಲ್ಲಿ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲ ರೈಲು, ಬಸ್‌ ಮೆಟ್ರೊ ನಿಲ್ದಾಣಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಿದ್ದು, ಸೂಕ್ತ ತಪಾಸಣೆ ಮಾಡಿ ಒಳ ಬಿಡಲಾಗುತ್ತದೆ.

ಕಾನೂನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಚಲೋಗೆ ಕರೆ ಕೊಟ್ಟಿದ್ದ ರೈತರನ್ನು ಫೆ.13ರಂದು ಗಡಿಯಲ್ಲಿ ತಡೆ ಹಿಡಿಯಲಾಗಿತ್ತು.

Share this article