ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಸಮರ ಸಾರಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘ಕೇವಲ ಜನಸಂಖ್ಯೆ ಆಧರಿಸಿ ಲೋಕಸಭಾ ಕ್ಷೇತ್ರಗಳನ್ನು ನಿರ್ಧರಿಸುವ ಮೂಲಕ ದಕ್ಷಿಣದ ರಾಜ್ಯಗಳಿಗೆ ದಂಡನೆ ವಿಧಿಸಬೇಡಿ’ ಎಂದಿದ್ದಾರೆ.
ಚೆನ್ನೈ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಸಮರ ಸಾರಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘ಕೇವಲ ಜನಸಂಖ್ಯೆ ಆಧರಿಸಿ ಲೋಕಸಭಾ ಕ್ಷೇತ್ರಗಳನ್ನು ನಿರ್ಧರಿಸುವ ಮೂಲಕ ದಕ್ಷಿಣದ ರಾಜ್ಯಗಳಿಗೆ ದಂಡನೆ ವಿಧಿಸಬೇಡಿ’ ಎಂದಿದ್ದಾರೆ.
ಶುಕ್ರವಾರ ಹೇಳಿಕೆ ನೀಡಿರುವ ಅವರು, ‘ಕೇಂದ್ರ ಸರ್ಕಾರದ ಅನ್ಯಾಯವನ್ನು ತಮಿಳುನಾಡು ಹಾಗೂ ಡಿಎಂಕೆ ಎಂದಿಗೂ ಸಹಿಸುವುದಿಲ್ಲ. ನಮ್ಮ ಬೇಡಿಕೆ ಸ್ಪಷ್ಟವಾಗಿದೆ. ಕೇವಲ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳನ್ನು ನಿರ್ಧರಿಸಬೇಡಿ. ಜನಸಂಖ್ಯಾ ಬೆಳವಣಿಗೆಯನ್ನು ನಿಯಂತ್ರಿಸಲು ಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಂಡ ದಕ್ಷಿಣ ರಾಜ್ಯಗಳನ್ನು ದಂಡಿಸಬೇಡಿ’ ಎಂದಿದ್ದಾರೆ.
‘ನಾವು ತಮಿಳುನಾಡಿನ ಕಲ್ಯಾಣ ಮತ್ತು ಭವಿಷ್ಯದ ವಿಷಯದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಒಟ್ಟಾಗಿ ನಿಂತು ನಮ್ಮ ರಾಜ್ಯದ ಹಕ್ಕುಗಳಿಗಾಗಿ ಹೋರಾಡಬೇಕು’ ಎಂದು ಡಿಎಂಕೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.