- 80 ಸಾವಿರ ತೀರ್ಪುಗಳ ಭಾಷಾಂತರಕ್ಕೆ ಸುಪ್ರೀಂ ಕ್ರಮ ಸ್ವಾಗತಾರ್ಹಪಿಟಿಐ ನವದೆಹಲಿ
ಶನಿವಾರ ಕಾನೂನು ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲರಿಗೂ ನ್ಯಾಯ ತಲುಪಿದಾಗ ಮಾತ್ರ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಬಹುದು. ಎಲ್ಲರಿಗೂ ಅರ್ಥವಾಗುವ ಭಾಷೆಯಲ್ಲಿ ತೀರ್ಪುಗಳು ಲಭ್ಯ ಇರಬೇಕು. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಈ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ತೀರ್ಪುಗಳು ಮತ್ತು ಕಾನೂನು ದಾಖಲೆಗಳನ್ನು ಸ್ಥಳೀಯ ಭಾಷೆಗಳಲ್ಲಿ ಒದಗಿಸಬೇಕು ಎಂದು ಹೇಳಿದರು.
‘ಸುಪ್ರೀಂ ಕೋರ್ಟ್ 18 ಭಾರತೀಯ ಭಾಷೆಗಳಲ್ಲಿ 80,000 ಕ್ಕೂ ಹೆಚ್ಚು ತೀರ್ಪುಗಳನ್ನು ಭಾಷಾಂತರಿಸಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.ಈ ಪ್ರಯತ್ನ ಹೈಕೋರ್ಟ್ ಮತ್ತು ಜಿಲ್ಲಾ ಮಟ್ಟದಲ್ಲಿಯೂ ಮುಂದುವರಿಯುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ’ ಎಂದು ಹೇಳಿದರು.