ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿರುವ ಎಂಟು ವಿಚಾರಣಾ ಸಮನ್ಸ್‌ಗೆ ಗೈರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಇ.ಡಿ. ದೆಹಲಿ ಸ್ಥಳೀಯ ನ್ಯಾಯಾಲಯದಲ್ಲಿ ಹೊಸ ಪ್ರಕರಣ ದಾಖಲಿಸಿದೆ.
ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಇದಕ್ಕೂ ಮೊದಲು ಇಡಿ ಮೊದಲ ಮೂರು ಸಮನ್ಸ್‌ಗಳಿಗೆ ಕೇಜ್ರಿವಾಲ್ ಗೈರಾಗಿದ್ದಾರೆಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಅದರ ವಿಚಾರಣೆಯು ಮಾ.16ರಂದು ನಡೆಯಲಿದೆ.