ಛತ್ತೀಸ್‌ಗಢದ ಬಿಜಾಪುರಲ್ಲಿ ಭದ್ರತಾ ಪಡೆ ಗುಂಡಿಗೆ 8 ನಕ್ಸಲರು ಬಲಿ : ಈ ವರ್ಷ 50 ಸಾವು

KannadaprabhaNewsNetwork |  
Published : Feb 02, 2025, 01:02 AM ISTUpdated : Feb 02, 2025, 04:49 AM IST
Naxals

ಸಾರಾಂಶ

ಛತ್ತೀಸಗಢದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವಿನ ಗುಂಡಿನ ಚಕಮಕಿಯಲ್ಲಿ8 ನಕ್ಸಲರು ಸಾವನ್ನಪ್ಪಿದ್ದಾರೆ.

ಬಿಜಾಪುರ: ಛತ್ತೀಸಗಢದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವಿನ ಗುಂಡಿನ ಚಕಮಕಿಯಲ್ಲಿ8 ನಕ್ಸಲರು ಸಾವನ್ನಪ್ಪಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಶುಕ್ರವಾರವೇ ಮಾಹಿತಿ ಸಿಕ್ಕಿತ್ತು. 

ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ನಕ್ಸಲರು ಮುಖಾಮುಖಿಯಾಗಿದ್ದು, ಈ ವೇಳೆ ಪರಸ್ಪರ ಗುಂಡಿನ ಕಾಳಗ ನಡೆದಿದೆ. ಈ ವೇಳೆ 8 ನಕ್ಸಲರು ಸಾವನ್ನಪ್ಪಿದ್ದಾರೆ.

 ಘಟನಾ ಸ್ಥಳದಿಂದ ಗ್ರೆನೇಡ್‌ ಲಾಂಚರ್‌, ರೈಫಲ್‌ ಸೇರಿದಂತೆ ವಿವಿಧ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಶನಿವಾರದ ದಾಖಲಾದ ಸಾವಿನೊಂದಿಗೆ ರಾಜ್ಯದಲ್ಲಿ ಈ ವರ್ಷ ಸಾವನ್ನಪ್ಪಿದ ನಕ್ಸಲರ ಸಂಖ್ಯೆ 50ಕ್ಕೆ ತಲುಪಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!