ಜೂ. ಏಷ್ಯಾ ಪಿಕಲ್‌ಬಾಲ್:ರಾಜ್ಯದ 8 ಮಂದಿ ಆಯ್ಕೆ

KannadaprabhaNewsNetwork |  
Published : May 24, 2026, 01:15 AM IST
ಪಿಕ್‌ ಬಾಲ್‌ | Kannada Prabha

ಸಾರಾಂಶ

ಥಾಯ್ಲೆಂಡ್‌ನಲ್ಲಿ ನಡೆಯಲಿರುವ ಏಷ್ಯಾ ಜೂನಿಯರ್ ಪಿಕಲ್‌ಬಾಲ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡಕ್ಕೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಥಾಯ್ಲೆಂಡ್‌ನಲ್ಲಿ ನಡೆಯಲಿರುವ ಏಷ್ಯಾ ಜೂನಿಯರ್ ಪಿಕಲ್‌ಬಾಲ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡಕ್ಕೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದಾರೆ. ಇವರ ಹೆಸರನ್ನು ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಸಂಸ್ಥೆ ಪ್ರಕಟಿಸಿದೆ. ಚಾಂಪಿಯನ್‌ಶಿಪ್‌ನಲ್ಲಿ ಹಿತ್ವಿಕ್, ಶ್ರೇಷ್ಠಾ, ಐದಿನ್ ಫರೀದ್, ಶ್ರೀಹರಿ, ಕೀರ್ತಿ, ಲಿಖಿತಾ, ಖುಷಿ ಮತ್ತು ಜಶನ್ ಪಾಲ್ಗೊಳ್ಳಲಿದ್ದಾರೆ. ಈ ಆಟಗಾರರ ಹೆಸರುಗಳನ್ನು ಆಲ್ ಇಂಡಿಯಾ ಪಿಕಲ್‌ಬಾಲ್ ಸಂಸ್ಥೆಗೆ ಶಿಫಾರಸು ಮಾಡಲಾಗಿದ್ದು, ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಪಿಕಲ್‌ಬಾಲ್‌ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಜತ್ ಕಾಂಕರ್ ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಪಾಕಿಸ್ತಾನಕ್ಕೂ ವಿಸ್ತರಿಸಿದ ಕಾಕ್ರೋಚ್‌ ಜನತಾ ಪಾರ್ಟಿ!
ವೈದ್ಯ, ಎಂಜಿನಿಯರಿಂಗ್‌ ಪ್ರವೇಶಕ್ಕೆ ಒಂದೇ ಪರೀಕ್ಷೆ?