15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Published : Jun 10, 2025, 06:58 AM IST
election commission

ಸಾರಾಂಶ

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ನವದೆಹಲಿ: ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ಈ ಎರಡೂ ರಾಜ್ಯಗಳ 2009ರಿಂದ 2024ರ ವರೆಗಿನ ಮತದಾರರ ಮಾಹಿತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಧ್ಯಮ ವರದಿ ಹೇಳಿದೆ, ಈ ಬಗ್ಗೆ ಆಯೋಗ ಅಧಿಕೃತವಾಗಿ ಏನೂ ಹೇಳಿಲ್ಲ.

ಈ ಕುರಿತ ವರದಿಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಇದು ಚುನಾವಣಾ ಆಯೋಗದ ಮೊದಲ ಒಳ್ಳೆಯ ನಿರ್ಧಾರ’ ಎಂದು ಸ್ವಾಗತಿಸಿದ್ದಾರೆ. ಜತೆಗೆ, ‘ಈ ಪಟ್ಟಿಯನ್ನು ಎಂದು ಬಿಡುಗಡೆ ಮಾಡಲಾಗುವುದು ಎಂಬುದನ್ನು ಆಯೋಗ ನಿಖರವಾಗಿ ತಿಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಕಳೆದ ಕೆಲ ದಿನಗಳಿಂದ, ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯ ವೇಳೆ ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸಲಾಗಿತ್ತು ಹಾಗೂ ಮತದಾನದ ಪ್ರಮಾಣವನ್ನು ಕೃತಕವಾಗಿ ಹೆಚ್ಚಿಸಲಾಗಿತ್ತು ಎಂದು ಗಾಂಧಿ ಆರೋಪಿಸುತ್ತಿದ್ದಾರೆ. ಇದನ್ನು ಚುನಾವಣಾ ಆಯೋಗ ಅಲ್ಲಗಳೆಯುತ್ತಲೇ ಬಂದಿತ್ತು. ಇದರ ನಡುವೆಯೇ ಪಟ್ಟಿ ಬಿಡುಗಡೆಯ ವಿಷಯ ಹೊರಬಿದ್ದಿದೆ.

PREV
Read more Articles on

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !