ಮಾ.14-15ಕ್ಕೆ ಲೋಕಸಭಾ ಚುನಾವಣೆ ದಿನ ಘೋಷಣೆ?

KannadaprabhaNewsNetwork |  
Published : Mar 06, 2024, 02:16 AM IST
ಚುನಾವಣೆ | Kannada Prabha

ಸಾರಾಂಶ

ಈ ಬಾರಿಯೂ 7 ಹಂತಗಳಲ್ಲಿ ಲೋಕಸಮರ ನಡೆಯುವ ಸಾಧ್ಯತೆಯಿದ್ದು ಮಾ.14 ಇಲ್ಲವೇ 15ರಂದು ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿಮಾಧ್ಯಮಗಳು ವರದಿ ಮಾಡುತ್ತಿವೆ.

ನವದೆಹಲಿ: ಹದಿನೆಂಟನೇ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಮಾ.14 ಇಲ್ಲವೇ 15ರಂದು ಚುನಾವಣಾ ಆಯೋಗವು ಸುದ್ದಿಗೋಷ್ಠಿಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಈ ಬಾರಿಯೂ ಸಹ ಕಳೆದ ಬಾರಿಯಂತೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ಕೈಗೊಂಡಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಈಗಾಗಲೇ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡು ಸಿದ್ಧತೆಯನ್ನು ಪರಿಶೀಲಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ