ಚುನಾವಣಾ ಬಾಂಡ್‌ಗಳಿಂದ ಪಕ್ಷಗಳಿಗೆ 16518 ಕೋಟಿ ರು.

KannadaprabhaNewsNetwork |  
Published : Feb 16, 2024, 01:45 AM ISTUpdated : Feb 16, 2024, 12:40 PM IST
ಚುನಾವಣಾ ಬಾಂಡ್‌ | Kannada Prabha

ಸಾರಾಂಶ

ಚುನಾವಣಾ ಬಾಂಡ್‌ನಿಂದ ಬಿಜೆಪಿಗೆ ಅತ್ಯಧಿಕ 6,564 ಕೋಟಿ ರು. ದೇಣಿಗೆ ಸಂಗ್ರಹವಾಗಿದೆ. ಕಾಂಗ್ರೆಸ್‌ಗೆ 1135 ಕೋಟಿ ರು., ಟಿಎಂಸಿಗೆ 1096 ಕೋಟಿ ರು., ಜೆಡಿಎಸ್‌ಗೆ 13 ಕೋಟಿ ರು. ಬಾಂಡ್‌ ದೇಣಿಗೆ ಬಂದಿದೆ.

ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ 2018ರ ಮಾರ್ಚ್‌ನಿಂದ 2024ರ ಜನವರಿವರೆಗೆ 16,518 ಕೋಟಿ ರು. ಹಣವು ದೇಶದ ರಾಜಕೀಯ ಪಕ್ಷಗಳಿಗೆ ಸಂದಾಯವಾಗಿದೆ ಎಂದು ಸರ್ಕಾರ ಸಂಸತ್ತಿಗೆ ನೀಡಿದ್ದ ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ಇನ್ನು 2017-18ರಿಂದ 2022-23ರ ನಡುವಿನ ಅವಧಿಯಲ್ಲಿ ಎಸ್‌ಬಿಐ ಮೂಲಕ 30 ಕಂತುಗಳಲ್ಲಿ 12,008 ಮೌಲ್ಯದ ಬಾಂಡ್‌ಗಳನ್ನು ವಿತರಿಸಲಾಗಿದೆ. ಇದರಲ್ಲಿ ಬಿಜೆಪಿಗೆ ಅತಿ ಹೆಚ್ಚು ಎಂದರೆ 6,564 ಕೋಟಿ ರು. (ಶೇ.55ರಷ್ಟು ಹಣ) ದೇಣಿಗೆ ರೂಪದಲ್ಲಿ ಹರಿದುಬಂದಿದೆ. 

ನಂತರದ 2 ಸ್ಥಾನಗಳಲ್ಲಿರುವ ಕಾಂಗ್ರೆಸ್‌ಗೆ 1,135 ಕೋಟಿ ರು. (ಶೇ.9.5) ಹಾಗೂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ಗೆ 1,096 ಕೋಟಿ ರು., ಜೆಡಿಎಸ್‌ಗೆ 13 ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಸಂದಾಯವಾಗಿವೆ ಎಂದು ಅಂಕಿ-ಅಂಶಗಳು ಹೇಳಿವೆ.

ಅನೇಕ ಪ್ರಾದೇಶಿಕ ಪಕ್ಷಗಳು ಕೂಡ ನೂರಾರು ಕೋಟಿ ರು. ಮೊತ್ತದ ಬಾಂಡ್ ಪಡೆದಿವೆ.

ಚುನಾವಣಾ ಬಾಂಡ್‌ಗಳು 1000 ರು., 1 ಲಕ್ಷ ರು., 10 ಲಕ್ಷ ರು., ಹಾಗೂ 1 ಕೋಟಿ ರು. ಮುಖಬೆಲೆಯಲ್ಲಿ ಎಸ್‌ಬಿಐ ಶಾಖೆಗಳಲ್ಲಿ ಲಭ್ಯ ಇದ್ದವು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ತನ್ನದೇ ಸೈನಿಕರ ಸಾಯಲು ಬಿಟ್ಟ ದ್ರೋಹಿ ಪಾಕಿಸ್ತಾನ!
ಶಾಲೇಲಿ ಬ್ಲೇಡಿಂದ ಒಂದೇ ರೀತಿ ಕೈ ಕೊಯ್ದುಕೊಂಡ 35 ಮಕ್ಕಳು!