;Resize=(412,232))
ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.
ಕೇಜ್ರಿವಾಲ್ ಬಂಧನವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿದ ಕೇಜ್ರಿವಾಲ್ ತಮ್ಮ ಬಂಧನ ಕಾನೂನುಬಾಹಿರವೆಂದು ಸುಪ್ರೀಂ ಕೋರ್ಟ್‌ಗೆ ಏ.9 ಅರ್ಜಿ ಸಲ್ಲಿಸಿ, ಶೀಘ್ರವೇ ವಿಚಾರಣೆ ಕೈಗೆತ್ತುಕೊಳ್ಳಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಕೇಜ್ರಿವಾಲ್ ಅವರನ್ನು ಮಾ. 21 ರಂದು ಇಡಿ ಬಂಧಿಸಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಸೋಮವಾರದವರೆಗೆ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು.